ETV Bharat / state

ವರುಣದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ : ಗಾಯಾಳು ಆಸ್ಪತ್ರೆಗೆ ದಾಖಲು - varuna constituency

ವರುಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Assault on Bjp leader in mysore
ವರುಣದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು
author img

By

Published : May 1, 2023, 10:57 PM IST

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿನ ವರುಣ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಗೂಂಡಾಗಿರಿ ಮುಂದುವರೆದಿದೆ. ವರುಣ ಕ್ಷೇತ್ರದ ಟಿ. ನರಸೀಪುರ ಕಸಬಾ ಹೋಬಳಿಯಲ್ಲಿ ಬಿಜೆಪಿಯ ಬೂತ್​ ಮಟ್ಟದ ಅಧ್ಯಕ್ಷನ ಮೇಲೆ ಕಾಂಗ್ರೆಸ್​ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಟಿ. ನರಸೀಪುರ ಕಸಬಾ ಹೋಬಳಿ ಬೈರಾಪುರ ಬಡಾವಣೆ ಬೂತ್ ನಂಬರ್ 109ರಲ್ಲಿ ನಮ್ಮ ಭಾರತೀಯ ಜನತಾ ಪಾರ್ಟಿಯ ಬೂತ್ ಅಧ್ಯಕ್ಷ ದಿಲೀಪ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ದಿಲೀಪ್ ತಲೆಗೆ ಗಾಯಗಳಾಗಿದೆ. 'ಕ್ಷುಲ್ಲಕ ಕಾರಣವನ್ನೇ ನೆಪ ಮಾಡಿಕೊಂಡು ಕಾಂಗ್ರೆಸ್​​ ಕಾರ್ಯಕರ್ತರು ಗಲಾಟೆ ನಡೆಸಿ, ಹಲ್ಲೆ ಮಾಡಿದ್ದಾರೆ' ಎಂದು ಆರೋಪಿಸಿ ಟಿ. ನರಸೀಪುರ ಪೊಲೀಸ್​​ ಠಾಣೆಗೆ ದೂರು ನೀಡಲಾಗಿದೆ. ಹಲ್ಲೆಯಾದ ದಿಲೀಪ್ ಕುಮಾರ್​ನ್ನು ಟಿ. ನರಸೀಪುರ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕೆಲ ದಿನಗಳ ಹಿಂದೆಯೂ ಸಿದ್ದರಾಮನ ಹುಂಡಿಯಲ್ಲಿ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ರೆ ಕೊಲ್ಲಾಪುರದ ಪೈಲ್ವಾನ್ ತರ ಆಡ್ತಿದ್ರು : ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.