ಮೈಸೂರು: ಆರ್.ಎಸ್.ನಾಯ್ಡು ನಗರದಲ್ಲಿನ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಯತ್ನ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಸ್.ಆರ್.ನಾಯ್ಡು ನಗರದಲ್ಲಿರುವ ಹೋಲಿ ಕ್ರಾಸ್ ಸ್ಟಡಿ ಹೌಸ್ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ಮಾಡಿ ಯುವಕ ಪರಾರಿಯಾಗಿದ್ದ. ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಸಿಪಿ ಪ್ರದೀಪ್ ಗುಂಟಿ, ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು, ಪರಿಶೀಲನೆ ನಡೆಸಿದ್ದರು. ಇದಾದ ಬಳಿಕ 4 ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎನ್.ಆರ್.ಠಾಣೆಯಲ್ಲಿ ಸಂತ್ರಸ್ತೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.