ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಮೂಕನಹಳ್ಳಿ ಗೇಟ್ ಬಳಿ ನಡೆದಿದೆ.
ಹುಣಸೂರು ತಾಲೂಕಿನ ಮಾರುತಿ ಬಡಾವಣೆ ನಿವಾಸಿ ಶಿವಕುಮಾರ್ (50) ಮೃತ. ಈತ ಆಟೋದಲ್ಲಿ ತನ್ನ ಸ್ನೇಹಿತನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ, ಮೈಸೂರು-ಹುಣಸೂರು ಹೆದ್ದಾರಿಯ ಮೂಕನಹಳ್ಳಿ ಗೇಟ್ ಬಳಿ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ವೇಳೆ ಆಟೋ ಒಳಗಿದ್ದ ಪ್ರಯಾಣಿಕ ಕೆಳಗೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಲ್ಲದೆ ಚಾಲಕ ಸದಾಶಿವನಿಗೂ ಗಾಯಾವಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹುಣಸೂರು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.