ಮೈಸೂರು: ರಾಜ್ಯ ಮೈತ್ರಿ ಸರ್ಕಾರದಲ್ಲಿ ದೊಡ್ಡ ಮಟ್ಟದ ಅಸಮಾಧಾನ ಉಂಟಾಗಿದೆ ಎಂಬುದು ಈ ಹಿಂದೆಯೇ ಗೊತ್ತಾಗಿತ್ತು. ಹೀಗಾಗಿ ಅತೃಪ್ತ ಶಾಸಕರು ತಮ್ಮ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ಹೇಳಿರುವ ಕೇಂದ್ರ ಸಚಿವ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಬಿಎಸ್ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಡಿವಿಎಸ್, ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಮಟ್ಟದ ಬಿರುಕು ಉಂಟಾಗಿದೆ. ಹೀಗಾಗಿ ಕಾಂಗ್ರೆಸ್ ಸರ್ವ ಪತನವಾಗುತ್ತದೆ ಎಂದು ನನಗೆ ಅನಿಸುತ್ತದೆ. ಇವತ್ತು ರಾಜೀನಾಮೆ ಕೊಟ್ಟವರಲ್ಲಿ ಬಹಳ ದೊಡ್ಡ ವ್ಯಕ್ತಿಗಳು ಹಾಗೂ ಅತೃಪ್ತರಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡವಿಲ್ಲ. ಕೇಂದ್ರ ನಾಯಕರು ಸ್ಪಷ್ಟವಾಗಿ ಹೇಳಿದ್ದಾರೆ.
ಇನ್ನೂ ರಾಜ್ಯದಲ್ಲಿ 15 ಜನ ಶಾಸಕರು ಅತೃಪ್ತರೆಂದು ರಾಜೀನಾಮೆ ನೀಡಿದರೆ ಯಾರಿಗೆ ಬಹುಮತ ಇರುತ್ತದೆಯೋ ಅವರು ಸರ್ಕಾರ ನಡೆಸಬಹುದು ಇನ್ನೂ ಮತ್ತೊಮ್ಮೆ ಮಧ್ಯಂತರ ಚುನಾವಣೆಗೆ ರಾಜ್ಯದ ಜನತೆಗೆ ಇಷ್ಟವಿಲ್ಲ. ಬಿಜೆಪಿ ಒಂದು ರಾಜಕೀಯ ಪಕ್ಷವಾಗಿ ಏನೆಲ್ಲಾ ಮಾಡಬಹುದು ಅದನ್ನು ಮಾಡುತ್ತದೆ. ಸಂದರ್ಭ ಬಂದರೆ ನಾವು ಸರ್ಕಾರ ರಚಿಸುತ್ತೇವೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರೇ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಜತೆಗೆ ರಾಜ್ಯದಲ್ಲಿ ನಮ್ಮ ಸರ್ಕಾರ ಹೆಚ್ಚು ಶಾಸಕರನ್ನ ಹೊಂದಿರುವ ಏಕೈಕ ಪಕ್ಷ ಎಂದು ಹೇಳಿಕೆ ನೀಡಿದ್ದಾರೆ.