ETV Bharat / state

ಮದುವೆ, ಸಮಾರಂಭಗಳನ್ನು ಸಂಪೂರ್ಣ ನಿಷೇಧಿಸಿ: ಕುರುಬೂರು ಶಾಂತಕುಮಾರ್ ಮನವಿ

ರಾಜ್ಯಾದ್ಯಂತ ಕೊರೊನಾ ಸೋಂಕಿತರು ಹೆಚ್ಚಾಗುತ್ತಿದ್ದು, ಇದರ ನಡುವೆ ಮದುವೆ, ನಾಮಕರಣಗಳಂತಹ ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

author img

By

Published : Jul 8, 2020, 5:16 PM IST

Kurubur Shantakumar
ಕುರುಬೂರು ಶಾಂತಕುಮಾರ್

ಮೈಸೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮದುವೆ ಹಾಗೂ ಇತರ ಸಮಾರಂಭಗಳನ್ನು ನಿಷೇಧಿಸಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್

ರಾಜ್ಯ ಹಾಗೂ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರು ಇನ್ನೂ ಎಚ್ಚೆತ್ತುಕೊಂಡಿಲ್ಲ. ಸರ್ಕಾರ ಮದುವೆ ಹಾಗೂ ಇತರ ಸಮಾರಂಭಗಳಲ್ಲಿ ‌ಕೇವಲ 50 ಜನ ಮಾತ್ರ ಭಾಗವಹಿಸಬೇಕೆಂದು ತಿಳಿಸಿದ್ದರೂ ಜನರು ಗುಂಪು ಗುಂಪಾಗಿ ಸೇರುತ್ತಿದ್ದಾರೆ. ಇದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದರು.

Appeal Letter
ಮನವಿ ಪತ್ರ

ಅಷ್ಟೇ ಅಲ್ಲದೆ ಮದುವೆ, ನಾಮಕರಣ, ಹುಟ್ಟುಹಬ್ಬದಂತಹ ಸಮಾರಂಭಗಳಲ್ಲಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿಲ್ಲ. ಇಂತಹ ಸಮಾರಂಭಗಳನ್ನು ಸಂಪೂರ್ಣ ನಿಷೇಧ ಮಾಡಿ ಆದೇಶ ಹೊರಡಿಸಬೇಕು. ಈ ಆದೇಶ ಉಲ್ಲಂಘನೆ ಮಾಡುವವರಿಗೆ ಕಠಿಣ ಕ್ರಮ ಕೈಗೊಂಡು ದಂಡ ವಿಧಿಸುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.