ETV Bharat / state

ಬೆಂಗಳೂರು - ಮೈಸೂರು ಹೆದ್ದಾರಿ ನಾಮಕರಣ : ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧ ಎಂದ ಯದುವೀರ್ - Bangalore Mysore Highway

ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ - ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡುವಂತೆ ಚರ್ಚೆ - ಸರ್ಕಾರದ ನಿರ್ಧಾರಕ್ಕೆ ಬದ್ಧ ಎಂದ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​

bangalore-mysore-highway-we-are-bound-by-the-governments-decision-says-yaduveer
ಬೆಂಗಳೂರು - ಮೈಸೂರು ಹೆದ್ದಾರಿ ನಾಮಕರಣ : ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧ...ಯದುವೀರ್
author img

By

Published : Jan 11, 2023, 4:50 PM IST

Updated : Jan 11, 2023, 5:08 PM IST

ಸರ್ಕಾರದ ನಿರ್ಧಾರಕ್ಕೆ ನಾವು ಬದ್ಧ ಎಂದ ಯದುವೀರ್

ಮೈಸೂರು : ಬೆಂಗಳೂರು- ಮೈಸೂರು ನಡುವಿನ ದಶಪಥ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಬೇಕೆಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಏನು ತೀರ್ಮಾನ ಕೈಗೊಳ್ಳುತ್ತದೆಯೋ ಅದಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಇಂದು ನಗರದ ಚಾಮರಾಜೇಂದ್ರ ಅರಸು ಬೋರ್ಡಿಂಗ್ ಸ್ಕೂಲ್​ನಲ್ಲಿ ಹೊಸ ಕೋರ್ಸ್ ಗಳನ್ನು ಆರಂಭಿಸಿದ ಬಳಿಕ 'ಈಟಿವಿ ಭಾರತ' ಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು - ಮೈಸೂರು ನಡುವಿನ ದಶಪಥ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ಇಡುವಂತೆ ಒತ್ತಾಯ ಕೇಳಿಬರುತ್ತಿದೆ. ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸೇರಿದಂತೆ ಹಲವು ಮುಖಂಡರು ದಶಪಥ ರಸ್ತೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವಂತೆ ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಯಾಗಿ ಸಂಸದ ಪ್ರತಾಪ್ ಸಿಂಹ ದಶಪಥ ರಸ್ತೆಗೆ ಕಾವೇರಿ ಹೈ ವೇ ಎಂದು ಹೆಸರಿಡುವಂತೆ ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೋ ಅದಕ್ಕೆ ಬದ್ಧ : ಈ ಬಗ್ಗೆ ಈಟಿವಿ ಭಾರತ ದೊಂದಿಗೆ ಮಾತನಾಡಿರುವ ರಾಜವಂಶಸ್ಥ ಯದುವೀರ್ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವ ಬಗ್ಗೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೋ ಅದಕ್ಕೆ ನಾವು ಬದ್ಧ. ಈ ವಿಚಾರದಲ್ಲಿ ನಮ್ಮ ತಕರಾರು ಇಲ್ಲ. ಸರ್ಕಾರಕ್ಕೆ ಯಾವುದು ಸೂಕ್ತ ಅನಿಸುತ್ತದೋ ಅದನ್ನೇ ಮಾಡಲಿ ಎಂದು ಹೇಳಿದರು.

ಚಾಮುಂಡಿ ಬೆಟ್ಟಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಮಾಡಿ : ಈ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್​ ಅವರು, ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ "ಪ್ರಸಾದ್" ಯೋಜನೆ ಅಡಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಮಾಡುವಾಗ ಪರಿಸರ ಕಾಳಜಿ ಇಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡಬೇಕು. ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಸ್ಥಳ. ಪರಿಸರ ಸಂರಕ್ಷಣೆ ಮತ್ತು ವನ್ಯಜೀವಿ ಸುರಕ್ಷತೆ ಬಗ್ಗೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡಬೇಕು. ಜೊತೆಗೆ ಚಾಮುಂಡಿ ಬೆಟ್ಟದ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ ಕೆಲಸ ಆಗಲಿ ಎಂದು ಸಲಹೆ ನೀಡಿದರು.

"ಚಾಮುಂಡಿ ಬೆಟ್ಟ ಉಳಿಸಿ" ಸಮಿತಿಯ ಸಭೆ : ಕೇಂದ್ರ ಸರ್ಕಾರದ "ಪ್ರಸಾದ್" ಯೋಜನೆ ಅಡಿ ಚಾಮುಂಡಿ ಬೆಟ್ಟ ಅಭಿವೃದ್ಧಿಗೆ 49.21 ಕೋಟಿ ಹಣ ಬಿಡುಗಡೆ ಆಗಿದೆ. ಈ ಹಣದಲ್ಲಿ ಚಾಮುಂಡಿ ಬೆಟ್ಟದ ಮೇಲೆ ವಿವಿಧ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ. ಆದರೆ ಇದಕ್ಕೆ ವಿರುದ್ಧವಾಗಿ "ಚಾಮುಂಡಿ ಬೆಟ್ಟ ಉಳಿಸಿ" ಸಮಿತಿ ಪ್ರತಿಭಟನೆ ನಡೆಸುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ಯಾವುದೇ ರೀತಿಯ ಆಧುನಿಕ ಅಭಿವೃದ್ಧಿ ಕೆಲಸಗಳು ನಡೆದರೆ ಪರಿಸರಕ್ಕೆ ಹಾಗೂ ಬೆಟ್ಟದ ಧಾರ್ಮಿಕ ಪಾವಿತ್ರ್ಯತೆಗೆ ಅಡ್ಡಿಯಾಗುತ್ತದೆ ಎಂದು ಹೇಳಿದೆ.

ಇನ್ನು ಚಾಮುಂಡಿ ಬೆಟ್ಟದಲ್ಲಿ "ಪ್ರಸಾದ್" ಯೋಜನೆ ಜಾರಿಗೆ ಮುನ್ನ ಪರಿಸರ ತಜ್ಞರ ಜೊತೆ ಚರ್ಚೆ ಮಾಡಬೇಕೆಂದು "ಚಾಮುಂಡಿ ಬೆಟ್ಟ ಉಳಿಸಿ" ಸಮಿತಿ ಆಗ್ರಹಿಸಿದೆ. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ಸಿದ್ಧಗೊಳಿಸುವ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದರು. ಇದರ ಜೊತೆಗೆ ನಾಳೆ ಮೈಸೂರಿನ ಪತ್ರಿಕಾ ಭವನದಲ್ಲಿ "ಚಾಮುಂಡಿ ಬೆಟ್ಟ ಉಳಿಸಿ" ಹೋರಾಟ ಸಮಿತಿ ಪತ್ರಿಕಾ ಗೋಷ್ಠಿ ನಡೆಸಲಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಇದನ್ನೂ ಓದಿ : ಬೆಂಗಳೂರು-ಮೈಸೂರು ಹೆದ್ದಾರಿಗೆ ಕಾವೇರಿ ಎಕ್ಸ್​​ಪ್ರೆಸ್ ವೇ ಎಂದು ನಾಮಕರಣ ಮಾಡಿ : ಗಡ್ಕರಿಗೆ ಪ್ರತಾಪ್ ಸಿಂಹ ಮನವಿ

Last Updated : Jan 11, 2023, 5:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.