ಮೈಸೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ(ಎನ್‌ಡಿಎ) ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಿರಿದರ್ಶಿನಿ ಬಡಾವಣೆಯಲ್ಲಿ ನಡೆದಿದೆ.
ಸುಚಿತ್ ಓಬಲೇಶ್ ರೈ (19) ಮೃತ ದುರ್ದೈವಿ. ವಿದ್ಯಾವಿಕಾಸ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ಓದುತ್ತಿದ್ದ ಈತ ಇಂದು ಪರೀಕ್ಷೆಗೆ ಹಾಜರಾಗಬೇಕಿತ್ತು.
ಕೊರೊನಾ ರಜೆ ವೇಳೆ ಎನ್‌ಡಿಎ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ಯುವಕ, ಕೊಡಗಿನ ಶಾಲೆಯಲ್ಲಿ ಟ್ರೈನಿಂಗ್ ಪಡೆದಿದ್ದ. ಈತನ ತಾಯಿ ಹೈಸ್ಕೂಲ್ ಶಿಕ್ಷಕರಾಗಿದ್ದಾರೆ. ಶನಿವಾರ ತಾಯಿ ಕೆಲಸಕ್ಕೆ ಹೋದ ನಂತರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.