ETV Bharat / state

ಆ ಗುಂಪು ದೊಣ್ಣೆಗಳನ್ನ ಹಿಡ್ಕೊಂಡು ಬಂತು.. ಇವರೇನೂ ಕಮ್ಮಿ ಇರಲಿಲ್ಲ.. - kannadanews

ಪಾರ್ಕಿಂಗ್ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆಯಾಗಿತ್ತು. ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ತಾರಕಕ್ಕೇರಿದ ಗಲಾಟೆ
author img

By

Published : May 20, 2019, 5:50 PM IST

ಮೈಸೂರು : ಕಳೆದ ರಾತ್ರಿ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಗುಂಪಿನ ವ್ಯಾಪಾರಸ್ಥರ ನಡುವೆ ವಾಹನಗಳ ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ ನಡೆದಿದ್ದು, 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೂಕ್ಷ್ಮ ಪ್ರದೇಶವಾದ ಈ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಎರಡು ಗುಂಪಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ಸಿಕ್ಕ ಸಿಕ್ಕ ವಾಹನಗಳನ್ನು ಜಖಂಗೊಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಂಡಿ ಪೊಲೀಸರು‌ ಗಲಾಟೆಯನ್ನು ಹತೋಟಿಗೆ ತರಲು ಆರಂಭದಲ್ಲಿ ಸಾಧ್ಯವಾಗಲಿಲ್ಲ. ಹೆಚ್ವುವರಿ ಪೊಲೀಸರ ಸಹಾಯದಿಂದ ಗಲಾಟೆಯನ್ನು ಹತೋಟಿಗೆ ತರಲಾಗಿತ್ತು. ಸ್ಥಳದಲ್ಲಿ ಈಗ ಬಿಗುವಿನ ವಾತಾವರಣ ಉಂಟಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ‌

ಕ್ಷುಲ್ಲಕ ಕಾರಣಕ್ಕೆ ತಾರಕಕ್ಕೇರಿದ ಗಲಾಟೆ

ಘಟನೆ ಸಂಬಂಧ 6 ಜನರನ್ನು ಬಂಧಿಸಲಾಗಿದ್ದು, ಗಲಾಟೆಗೆ ಪ್ರಚೋದನೆ ನೀಡಿದ ಮತ್ತಷ್ಟು ಜನರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Intro:ಮೈಸೂರು: ಪಾರ್ಕಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣದ ಹಿನ್ನಲೆಯಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು ೬ ಜನರನ್ನು ವಶಕ್ಕೆ ಪಡೆದಿರುವ ಘಟನೆ ಕಳೆದ ರಾತ್ರಿ ಮಂಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Body:
ಕಳೆದ ರಾತ್ರಿ ಮಂಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕೋಮುಗಳ ವ್ಯಾಪಾರಸ್ಥರ ನಡುವೆ ವಾಹನಗಳ ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ ನಡೆದಿದ್ದು ಸೂಕ್ಷ್ಮ ಪ್ರದೇಶವಾದ ಈ ಸ್ಥಳದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಎರಡು ಗುಂಪಿನ ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದು ಸಿಕ್ಕ ಸಿಕ್ಕ ವಾಹನಗಳ ಮೇಲೆ ಜಖಂಗೊಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಮಂಡಿ ಪೋಲಿಸರು‌ ಗಲಾಟೆಯನ್ನು ಹತೋಟಿಗೆ ತರಲು ಸಾಧ್ಯವಾಗದೆ ಹೆಚ್ವುವರಿ ಪೋಲಿಸರ ಸಹಾಯದಿಂದ ನಂತರ ಗಲಾಟೆಯನ್ನು ಹತೋಟಿಗೆ ತರಲಾಗಿದ್ದು ಸ್ಥಳದಲ್ಲಿ ಈಗ ವಿಗುವಿನ ವಾತಾವರಣ ಉಂಟಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೋಲಿಸ್ ಪಡೆ ನಿಯೋಜನೆ ಮಾಡಲಾಗಿದೆ. ‌ಈ ಘಟನೆಗೆ ಸಂಬಂಧಿಸಿದಂತೆ ಎರಡು ಕೋಮಿನ ೬ ಜನರನ್ನು ಬಂಧಿಸಲಾಗಿದ್ದು ಈ ಗಲಾಟೆಗೆ ಪ್ರಚೋದನೆ ನೀಡಿದ ಮತ್ತಷ್ಟು ಜನರ ಬಂಧನಕ್ಕೆ ಬಲೆ ಬೀಸಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.