ETV Bharat / state

ಮೈಸೂರು: ಬೈಕ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರ ದುರ್ಮರಣ

ಬೈಕ್​ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್​ ಸವಾರರಿಬ್ಬರೂ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಪೊಲೀಸ್​ ಠಾಣೆಗೆ ಶರಣಾಗಿದ್ದಾರೆ.

author img

By

Published : Sep 19, 2022, 3:55 PM IST

Bike Car Accident
ಬೈಕ್​ಗೆ ಕಾರು ಡಿಕ್ಕಿ

ಮೈಸೂರು: ಕಾರು ಹಾಗೂ ಬೈಕ್ ಡಿಕ್ಕಿ ಹೊಡೆದು, ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ವಿದ್ಯಾಪೀಠ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹೆಗ್ಗೋಠರು ಗ್ರಾಮದ ಮಹೇಶ್ (50)ಹಾಗೂ ಮಹದೇವಪ್ಪ(55) ಮೃತ ದುರ್ದೈವಿಗಳಾಗಿದ್ದಾರೆ.

ನಂಜನಗೂಡಿನಲ್ಲಿ‌ ಗಾರೆ ಕೆಲಸ ಮುಗಿಸಿಕೊಂಡು ಹೋಗುವಾಗ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಗೋಳೂರು ಗ್ರಾಮದ ವಿದ್ಯಾಪೀಠದ ಬಳಿ ಎದುರುಗಡೆಯಿಂದ ಬಂದ ಕಾರಿನ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಕೆಳಗಡೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್​ಗೆ ಕಾರು ಡಿಕ್ಕಿ.. ಸ್ಥಳದಲ್ಲಿಯೇ ಇಬ್ಬರ ದುರ್ಮರಣ

ವಿಷಯ ತಿಳಿದು ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಠಾಣೆಗೆ ಹೋಗಿ ಶರಣಾಗಿದ್ದಾರೆ.

ಇದನ್ನೂ ಓದಿ: ರಾಯಚೂರು: ಹಸು ತಪ್ಪಿಸಲು ಯತ್ನಿಸಿ ಕಾರು ಪಲ್ಟಿ, ಮಹಿಳೆ ಸಾವು, ಬಾಲಕಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.