ಮೈಸೂರು : ದ್ವಿಚಕ್ರ ವಾಹನಕ್ಕೆ ಜಲ್ಲಿ ತುಂಬಿದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಲಿಂಗಾಬುಧಿ ಪಾಳ್ಯದ ಬಳಿಯ ಪ್ರೀತಿ ಲೇಔಟ್ನಲ್ಲಿ ನಡೆದಿದೆ.
ಡಿ.ಸಾಲುಂಡಿ ನಿವಾಸಿ ಮಧುಸೂದನ್(25) ಮೃತ ಬೈಕ್ ಸವಾರ. ಕೆಲಸದ ನಿಮಿತ್ತ ಮೈಸೂರಿಗೆ ಬಂದಿದ್ದ ಈತ, ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಕುವೆಂಪುನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವನಜಾಕ್ಷಿ, ಸಿಬ್ಬಂದಿಗಳಾದ ರವಿ, ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ ಟ್ರ್ಯಾಕ್ಟರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದ್ದು, ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.