ಮೈಸೂರು : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.
ಟಿ.ನರಸೀಪುರ ಪಟ್ಟಣದ ನಿವಾಸಿ ನಂದಕುಮಾರ್ (38) ಮೃತ ದುರ್ದೈವಿ. ಕಪಿಲಾ ನದಿ ಸೇತುವೆ ಮೇಲೆ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಳಗ್ಗೆಯಾದರೂ ಮಗ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಹುಡುಕಾಟ ಆರಂಭಿಸಿದಾಗ, ಮೃತಪಟ್ಟಿರುವ ವಿಷಯ ತಿಳಿದು ಬಂದಿದೆ.
ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.