ಮೈಸೂರು : ಮೈಸೂರು ಜಿಲ್ಲಾ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಬೈಕ್ ಕಳವು ಆರೋಪಿಗಳಿಂದ 22 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಒಂದು ಅಕ್ರಮ ಗಾಂಜಾ ಪ್ರಕರಣ ಬೇಧಿಸಿದ್ದಾರೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು, ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಗಳು ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದರು. ಆರೋಪಿಗಳಿಂದ 8 ಬೈಕ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ತಿ. ನರಸೀಪುರ ಠಾಣೆಯ ಪೊಲೀಸರು, ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ, ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡ ಮೇರೆಗೆ ಆರೋಪಿಗಳಿಂದ 14 ಬೈಕ್‌ಗಳನ್ನು ವಶಪಡಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ಈ ಎರಡು ಪ್ರಕರಣಗಳಿಂದ 22 ಬೈಕ್‌ಗಳನ್ನು ಪಶಪಡಿಸಿಕೊಳ್ಳಲಾಗಿದೆ.
ಗಾಂಜಾ ವಶ: ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯ ಎನ್. ಬೇಗೂರು ಗ್ರಾಮದಲ್ಲಿ ವ್ಯಕ್ತಿಯೋರ್ವ ತನ್ನ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾಗಿಡಗಳನ್ನು ಬೆಳೆದಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದರು. ಅಂತರಸಂತೆ ಠಾಣಾಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿ 2 ಕೆಜಿ 250 ಗ್ರಾಂ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಂಡಿ ಕದಿಯಲು ಯತ್ನ, ಕಳ್ಳನ ಬಂಧನ: ತಡರಾತ್ರಿ ದೇವಸ್ಥಾನಕ್ಕೆ ನುಗ್ಗಿ ಹುಂಡಿ ಕದಿಯಲು ಯತ್ನಿಸುತ್ತಿದ್ದ ಖದೀಮನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ಕನಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾತ್ರಿ ವೇಳೆ ಕೈಚಳಕ ತೋರಿಸ್ತಿದ್ದ ಬೈಕ್ ಕಳ್ಳನಿಗೆ ಕೊನೆಗೂ ಸಿಕ್ತು ಸೆರೆವಾಸ