ಮೈಸೂರು: ಮಹಿಷಾ ದಸರಾ ಆಚರಣೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಅವರಿಗೆ ಬಿಜೆಪಿ ನಿಯೋಗ ಮನವಿ ಮಾಡಿದೆ.
ಮಹಿಷ ದಸರಾ ಆಚರಣಾ ಸಮಿತಿಯ ಅಧ್ಯಕ್ಷ ಪುರುಷೋತ್ತಮ್, ಅ.05ಕ್ಕೆ ಅನುಮತಿ ನೀಡದಿದ್ದರೂ ಮಹಿಷ ದಸರಾ ಮಾಡುತ್ತೇವೆ ಎಂದು ಸವಾಲು ಹಾಕಿದ್ದರು. ಈ ಹಿನ್ನೆಲೆಯಲ್ಲಿ ಸಿ.ಎಚ್.ವಿಜಯಶಂಕರ್,ಮೈವಿ ರವಿಶಂಕರ್ ನೇತೃತ್ವದ ಬಿಜೆಪಿ ನಿಯೋಗ ಡಿಸಿ ಡಾ.ಗೌತಮ್ ಬಗಾದಿಯವರನ್ನು ಭೇಟಿ ಮಾಡಿ ಮಹಿಷಾ ದಸರಾಗೆ ಆಚರಣೆಗೆ ಅನುಮತಿ ನೀಡದಂತೆ ಮನವಿ ಸಲ್ಲಿಸಿದರು.
ಎರಡು ದಿನಗಳ ಹಿಂದೆ ಪ್ರಗತಿಪರ ಚಿಂತಕರಾದ ಪ್ರೊ. ಕೆ.ಎಸ್. ಭಗವಾನ್, ಪ್ರೊ.ಚಂದ್ರಗುರು, ಮಹಿಷಾ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಸೇರಿದಂತೆ ಪ್ರಮುಖ ಸುದ್ದಿಗೋಷ್ಠಿ ನಡೆಸಿ ಮಹಿಷಾ ದಸರಾ ಆಚರಣೆಗೆ ಅನುಮತಿ ನೀಡಬೇಕೆಂದು ಒತ್ತಾಯಿಸಿದ್ದರು.
ಇದನ್ನೂ ಓದಿ: ಕತ್ತಲಿನಿಂದ ಬೆಳಕಿನೆಡೆಗೆ.. ಪ್ರಿಯತಮೆಯನ್ನು 10 ವರ್ಷ ಕೋಣೆಯಲ್ಲಿ ಬಚ್ಚಿಟ್ಟ ವ್ಯಕ್ತಿ ಕೊನೆಗೂ ಮದುವೆಯಾದ!