ಮೈಸೂರು: ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ನಂಜನಗೂಡು ಬಿಜೆಪಿ ಶಾಸಕ ಹರ್ಷವರ್ಧನ್ ಭೇಟಿ ನೀಡಿ ಪರಿಶೀಲಿಸಿದರು.
ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ಹಲವಾರು ಮನೆಗಳ ಮೇಲ್ಛಾವಣಿ ಕುಸಿದು 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮರಗಳು ರಸ್ತೆಯಲ್ಲಿ ಮುರಿದು ಬಿದ್ದಿವೆ. ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಹರ್ಷವರ್ಧನ್ ಭೇಟಿ ನೀಡಿ ಸ್ಥಳಗಳನ್ನ ಪರಿಶೀಲಿಸಿದರು. ಬಳಿಕ ಪರಿಹಾರ ನೀಡುವ ಭರವಸೆ ನೀಡಿದರು.
ಬಿಜೆಪಿ ಶಾಸಕ ಹರ್ಷವರ್ಧನ್ ಅವರಿಗೆ ತಾಲೂಕಿನ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.