ಮೈಸೂರು : ಮೊದಲ ಬಾರಿಗೆ ಸಾಂಸ್ಕೃತಿಕ ನಗರಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ನಗರದ ರಾಜೇಂದ್ರ ಕಲಾಮಂದಿರದಲ್ಲಿ ಆರಂಭವಾಯಿತು.
ಮೊದಲ ಬಾರಿಗೆ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಹಸುವಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭಿಸಲಾಯಿತು. ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಡಾ.ಲಕ್ಷ್ಮಣ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸೇರಿ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.