ETV Bharat / state

ಮತ್ತೆ ಆಪರೇಷನ್ ಕಮಲ ನಡೆಯುವ ಬಗ್ಗೆ ನಳೀನ್ ಕುಮಾರ್ ಹೇಳಿದ್ದೇನು?

author img

By

Published : Feb 17, 2020, 9:09 PM IST

ನಾವು ಆಪರೇಷನ್ ಕಮಲ ಮಾಡುವುದಿಲ್ಲ. ಆದರೆ ಬಿಜೆಪಿ ಬಾಗಿಲು ತೆರೆಯುತ್ತಿದೆ. ಮುಂದಿನ ದಿನಗಳಲ್ಲಿ ಏನೆಲ್ಲಾ ರಾಜಕೀಯ ಆಗಬಹುದು ಎಂಬುದನ್ನು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Nalin Kumar Kateel Reaction
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಮೈಸೂರು: ನಾವು ಆಪರೇಷನ್ ಕಮಲ ಮಾಡುವುದಿಲ್ಲ, ಆದರೆ ಬಿಜೆಪಿ ಬಾಗಿಲು ಸದಾ ತೆರೆದಿದೆ. ಮುಂದಿನ ದಿನಗಳಲ್ಲಿ ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
ಮೈಸೂರು ಜಿಲ್ಲೆಯ ನೂತನವಾಗಿ ಆಯ್ಕೆಯಾದ ಪಕ್ಷದ ವಿವಿಧ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ರಾಷ್ಟ್ರ ವೀರೋಧಿ ಘೋಷಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾರೇ ಆದರೂ ಈ ದೇಶದಲ್ಲಿದ್ದು ಬೇರೆ ದೇಶಕ್ಕೆ ಜೈಕಾರ ಹಾಕುವುದು ಸರಿಯಲ್ಲ. ಇತಂಹ ರಾಷ್ಟ್ರ ವಿರೋಧಿಗಳಿಗೆ ಶಿಕ್ಷೆ ಆಗಲೇಬೇಕು. ಈ ವಿಚಾರದಲ್ಲಿ ಹಿಂದೂ ಕಾರ್ಯಕರ್ತರು ಎಂದು ಇಲ್ಲ. ಎಲ್ಲರೂ ಒಂದೇ ಎಂದರು.

ಇನ್ನು ಕಾಂಗ್ರೆಸ್ ಎಸ್ಸಿ-ಎಸ್ಟಿ ಕಾಯ್ದೆಯ ಅನ್ಯಾಯದ ಬಗ್ಗೆ ಪ್ರತಿಭಟನೆ ನಡೆಸುತ್ತಿದೆ. ಅವರ ಕೆಲಸ ಅವರು ಮಾಡಲಿ, ನಮ್ಮ ಕೆಲಸ ನಾವು ಮಾಡುತ್ತೇವೆ ಎಂದರು. ಹಾಗೆ ಬಿಜೆಪಿ ಪರವಾಗಿ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಮತ ಚಲಾವಣೆ ಮಾಡಿರುವುದು ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಯಬಹುದೆ ಎಂಬ ಪ್ರಶ್ನೆಗೆ ಆಪರೇಷನ್ ಮಾಡುವುದಿಲ್ಲ. ಆದರೆ ಬಿಜೆಪಿ ಬಾಗಿಲು ತೆರೆಯುತ್ತಿದೆ. ಮುಂದಿನ ದಿನಗಳಲ್ಲಿ ಏನೆಲ್ಲಾ ರಾಜಕೀಯ ಬೆಳವಣಿಗೆ ಆಗಬಹುದು ಎಂಬುದನ್ನು ಕಾದು ನೋಡಿ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.