ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ( ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ದೇಶ ವ್ಯಾಪಿ ಜಾರಿಗೆ ತರುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ನಿಷೇಧಾಜ್ಞೆ ಜಾರಿ ಇದ್ದ ಓವಲ್ ಮೈದಾನದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಿಎಎ ಹಾಗೂ ಎನ್ಆರ್ಸಿ ಕಾಯ್ದೆ ವಿರೋಧಿಸುತ್ತಿರುವವರ ವಿರುದ್ಧ ಕಿಡಿಕಾರಿದರು.
ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ಯಾರ ವಿರುದ್ಧವೂ ರ್ಯಾಲಿ ಮಾಡುವ ಉದ್ದೇಶವಿಲ್ಲ. ಈ ಕಾಯ್ದೆ ಬಗ್ಗೆ ಅರಿವು ಮೂಡಿಸಿ ಜನರಿಗೆ ಜಾಗೃತಿ ಮೂಡಿಸುತ್ತಿದ್ದೇವೆ. ಸಿಎಎಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ, ಸಂವಿಧಾನದ ಪ್ರಕಾರ ಹಕ್ಕನ್ನು ನೀಡಲಾಗುವುದು. ಬಾಂಗ್ಲಾ, ಪಾಕಿಸ್ತಾನ ಹಾಗು ಅಫ್ಘಾನಿಸ್ತಾನದಿಂದ ಬರುವ ಅಲ್ಪ ಸಂಖ್ಯಾತರಿಗೆ ಪೌರತ್ವ ಕೊಡುವುದು ಈ ಕಾಯ್ದೆಯ ಉದ್ದೇಶ ಎಂದು ತಿಳಿಸಿದರು.