ETV Bharat / state

ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಗಮನ ಹರಿಸಿ: ಜಿ.ಟಿ.ದೇವೇಗೌಡ

ನೀರು ಸರಬರಾಜು ತೊಂದರೆ ಇರುವ ಕಡೆಗಳಲ್ಲಿ ಅಧಿಕಾರಿಗಳು ಹೆಚ್ಚಿನ ಗಮನವಹಿಸಿ ಎಂದು ಸಚಿವ ಜಿ.ಟಿ.ದೇವೇಗೌಡ ಸೂಚಿಸಿದ್ದಾರೆ.

author img

By

Published : May 16, 2019, 9:14 PM IST

ಜಿ.ಟಿ. ದೇವೇಗೌಡ

ಮೈಸೂರು: ರಾಜ್ಯದಾದ್ಯಂತ ಬರ ಸಮಸ್ಯೆ ತಡೆಗಟ್ಟಲು ಅದರಲ್ಲೂ ಕುಡಿಯುವ ನೀರಿನ ಸಮಸ್ಯೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲಿ ನೀರು ಸಮಸ್ಯೆ ಕಂಡುಬರುತ್ತದೋ ಅಲ್ಲಿಗೆ 24 ಗಂಟೆಯೊಳಗೆ ನೀರು ಸರಬರಾಜು ಮಾಡಲು ಸೂಚನೆ ನೀಡಿದೆ. ಮೈಸೂರು ಜಿಲ್ಲೆಯಲ್ಲಿ ನೀರು ಸರಬರಾಜು ತೊಂದರೆ ಇರುವ ಕಡೆಗಳಲ್ಲಿ ಅಧಿಕಾರಿಗಳು ಹೆಚ್ಚಿನ ಗಮನವಹಿಸಿ ನೀರು ಸರಬರಾಜು ಮಾಡಬೇಕೆಂದು ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಬರ ಪರಿಸ್ಥಿತಿ ನಿರ್ವಹಣೆ ಮತ್ತು ಮಳೆಯ ಮುನ್ನೆಚ್ಚರಿಕೆಯ ಕ್ರಮ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರಿನ ಹಿನಕಲ್ ಗ್ರಾಮದಲ್ಲಿ ಹೆಚ್ಚು ನೀರಿನ ಸಮಸ್ಯೆ ಇದೆ. ಅದನ್ನು ಆದಷ್ಟು ಬೇಗ ಸರಿಪಡಿಸಿ ಮತ್ತು ವಿಜಯನಗರ 3 ಮತ್ತು 4ನೇ ಹಂತದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗುತ್ತಿದೆ ಎಂದು ನಿವಾಸಿಗಳು ದೂರುತ್ತಿದ್ದಾರೆ. ಅಲ್ಲಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮುಡಾ ವ್ಯಾಪ್ತಿಯ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವೇ ವಹಿಸಿಕೊಳ್ಳಬೇಕು. ಹೊನಗಳ್ಳಿ, ಮೇಳಾಪುರದ ಅಮೃತ ಯೋಜನೆಯಿಂದ 60 ಒ.ಐ.ಆ ಕಬಿನಿಯಿಂದ 40 ಒ.ಐ.ಆ ನೀರು ಪೂರೈಸಿದರೆ ನಗರದಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಹೇಳಿದರು. ಬ್ಯಾತಹಳ್ಳಿಯಿಂದ ಕಡಕೊಳದವರೆಗೂ ಕಬಿನಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು. ಎಣಿಕೆ ಕಾರ್ಯ ಮುಗಿದ ಬಳಿಕ ಮತ್ತೆ ಎಲ್ಲಾ ಅಧಿಕಾರಿಗಳ ಸಭೆ ನಡೆಸಲಾಗುವುದು. ಅಲ್ಲಿಯ ತನಕ ನೀರು ಸಮಸ್ಯೆಗೆ ನೀಡಿರುವ ಹಣವನ್ನು ಉಪಯೋಗಿಸಿ ಮಾಹಿತಿ ನೀಡಬೇಕು ಎಂದರು.

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮಾತನಾಡಿ, ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ತಿಂಗಳಿಗೊಮ್ಮೆ ಸಭೆಗಳನ್ನು ನಡೆಸಿದರೆ ಬರ ಪರಿಸ್ಥಿತಿ ಸಮಸ್ಯೆ ಕಡಿಮೆ ಆಗುತ್ತದೆ. ಅಧಿಕಾರಿಗಳು ಜಿಲ್ಲಾ ಕೇಂದ್ರ ಬಿಟ್ಟು ತಾಲೂಕು ಕೇಂದ್ರಗಳಿಗೆ ಹೋಗಿ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಮಾತನಾಡಿ, ಜಿಲ್ಲೆಯ ನಾನಾ ಭಾಗಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನೀರಿನ ಸಮಸ್ಯೆಗೆ ಹಣ ಒದಗಿಸಲು ಜಿಲ್ಲಾಡಳಿತ ಸಿದ್ಧವಿದೆ. 20 ಕೋಟಿ ರೂ. ಹಣ ಇದೆ. ಯಾವ ಭಾಗದಲ್ಲಿ ಸಮಸ್ಯೆ ಇದೆಯೋ ಕೊಡಲು ಸಿದ್ಧ ಎಂದರು.

Intro:ಬರ Body:ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಗಮನ ಹರಿಸಿ: ಜಿ.ಟಿ. ದೇವೇಗೌಡ
 ಮೈಸೂರು: ರಾಜ್ಯದಾದ್ಯಂತ ಬರ ಸಮಸ್ಯೆ ತಡೆಗಟ್ಟಲು ಅದರಲ್ಲೂ ಕುಡಿಯುವ ನೀರಿನ ಸಮಸ್ಯೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲಿ ನೀರು ಸಮಸ್ಯೆ ಕಂಡುಬರುತ್ತದೋ ಅಲ್ಲಿಗೆ 24 ಗಂಟೆಯೊಳಗೆ ನೀರು ಸರಬರಾಜು ಮಾಡಲು ಸೂಚನೆ ನೀಡಿದೆ. ಮೈಸೂರು ಜಿಲ್ಲೆಯಲ್ಲಿ ನೀರು ಸರಬರಾಜು ತೊಂದರೆ ಇರುವ ಕಡೆಗಳಲ್ಲಿ ಅಧಿಕಾರಿಗಳು ಹೆಚ್ಚಿನ ಗಮನವಹಿಸಿ ನೀರು ಸರಬರಾಜು ಮಾಡಬೇಕೆಂದು ಉನ್ನತ ಶಿಕ್ಷಣ ಹಾಗೂ  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ  ಹೇಳಿದರು.
  ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಬರ ಪರಿಸ್ಥಿತಿ ನಿರ್ವಹಣೆ ಮತ್ತು ಮಳೆಯ ಮುನ್ನೆಚ್ಚರಿಕೆಯ ಕ್ರಮ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ಮೈಸೂರಿನ ಹಿನಕಲ್ ಗ್ರಾಮದಲ್ಲಿ ಹೆಚ್ಚು ನೀರಿನ ಸಮಸ್ಯೆ ಇದೆ ಅದನ್ನು ಆದಷ್ಟು ಬೇಗ ಸರಿಪಡಿಸಿ ಮತ್ತು ವಿಜಯನಗರ 3 ಮತ್ತು 4ನೇ ಹಂತದಲ್ಲಿ ನೀರು ಸರಬರಾಜಿನಲ್ಲಿ ತೊಂದರೆಯಾಗುತ್ತಿದೆ ಎಂದು ನಿವಾಸಿಗಳು ದೂರುತ್ತಿದ್ದಾರೆ. ಅಲ್ಲಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಡಾ ವ್ಯಾಪ್ತಿಯ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವೇ ವಹಿಸಿಕೊಳ್ಳಬೇಕು. ಹೊನಗಳ್ಳಿ, ಮೇಳಾಪುರದ ಅಮೃತ ಯೋಜನೆಯಿಂದ 60 ಒಐಆ,  ಕಬಿನಿಯಿಂದ 40 ಒಐಆ ನೀರು ಪೂರೈಸಿದರೆ ನಗರದಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಹೇಳಿದರು.
ಬ್ಯಾತಹಳ್ಳಿಯಿಂದ ಕಡಕೊಳದವರೆಗೂ ಕಬಿನಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು. ಎಣಿಕೆ ಕಾರ್ಯ ಮುಗಿದ ಬಳಿಕ ಮತ್ತೆ ಎಲ್ಲಾ ಅಧಿಕಾರಿಗಳ ಸಭೆ ನಡೆಸಲಾಗುವುದು ಅಲ್ಲಿಯ ತನಕ ನೀರು ಸಮಸ್ಯೆಗೆ ನೀಡಿರುವ ಹಣವನ್ನು ಉಪಯೋಗಿಸಿ ಮಾಹಿತಿ ನೀಡಬೇಕು ಎಂದರು.
ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಅವರು ಮಾತನಾಡಿ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ತಿಂಗಳಿಗೊಮ್ಮೆ ಸಭೆಗಳನ್ನು ನಡೆಸಿದರೆ ಬರ ಪರಿಸ್ಥಿತಿ ಸಮಸ್ಯೆ ಕಡಿಮೆ ಆಗುತ್ತದೆ. ಅಧಿಕಾರಿಗಳು ಜಿಲ್ಲಾ ಕೇಂದ್ರ ಬಿಟ್ಟು ತಾಲ್ಲೂಕು ಕೇಂದ್ರಗಳಿಗೆ ಹೋಗಿ ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ಮಾತನಾಡಿ ಜಿಲ್ಲೆಯ ನಾನಾ ಭಾಗಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನೀರಿನ ಸಮಸ್ಯೆಗೆ ಹಣ ಒದಗಿಸಲು ಜಿಲ್ಲಾಡಳಿತ ಸಿದ್ದವಿದೆ. 20 ಕೋಟಿ ರೂ. ಹಣ ಇದೆ ಯಾವ ಭಾಗದಲ್ಲಿ ಸಮಸ್ಯೆ ಇದೆಯೋ ಕೊಡಲು ಸಿದ್ಧ ಎಂದರು.
ಮೈಸೂರು ನಗರ ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್ ಮಾತನಾಡಿ ಮಳೆ ಬಂದರೆ ಜಿಲ್ಲೆಯಲ್ಲಿ ಸಮಸ್ಯೆ ಆಗಬಾರದು ಎಂದು ಚರಂಡಿಯ ಹೂಳು ತೆಗೆಸುವ ಕಾರ್ಯ ಪ್ರಗತಿಯಲ್ಲಿ ಇದ್ದು, ರಸ್ತೆಯ ಬದಿಯಲ್ಲಿರುವ ಒಣ ಮರಗಳನ್ನು ತೆಗೆಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಮುಡಾ ಆಯುಕ್ತರಾದ ಪಿ.ಎಸ್. ಕಾಂತರಾಜು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.Conclusion:ಬರ ಕುರಿತು ಸಭೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.