ಮೈಸೂರು: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಪಿರಿಯಾ ಪಟ್ಟಣ ತಾಲೂಕಿನ ಹೊಸಕೋಟೆ ಗ್ರಾಮದ ಬಳಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆವೋರ್ವರ ಶವ ಪತ್ತೆಯಾಗಿದೆ.
ಮಹಿಳೆಯನ್ನು ಕೊಲೆ ಮಾಡಿ ಬಳಿಕ ರಸ್ತೆ ಬದಿಯಲ್ಲಿ ಸುಟ್ಟು ಹಾಕಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಹೊಸಕೋಟೆ ಗ್ರಾಮದ ರಸ್ತೆಯಲ್ಲಿ ಮೃತದೇಹ ಬಿದ್ದಿದ್ದು, ಶವದಲ್ಲಿ ಹೊತ್ತಿ ಉರಿಯುತ್ತಿರುವ ಬೆಂಕಿ ನೋಡಿದ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪಿರಿಯಾಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಹಿಳೆಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.