ಮೈಸೂರು: ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 17 ರಂದು 51 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅಮ್ಆದ್ಮಿ ಪಾರ್ಟಿಯಿಂದ ರಾಜಶೇಖರ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಕೆ.ವೆಂಕಟೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕೆ.ಆರ್ ನಗರ ವಿಧಾನ ಸಭಾ ಕ್ಷೇತ್ರದಿಂದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ರವಿಶಂಕರ್ ಡಿ. ಭಾರತೀಯ ಜನತಾ ಪಕ್ಷದಿಂದ ಹೆಚ್.ಟಿ. ವೆಂಕಟೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಹೆಚ್.ಪಿ. ಮಂಜುನಾಥ್ ಕೆ ಆರ್ ಎಸ್ ಪಕ್ಷದಿಂದ ತಿಮ್ಮಾಬೋವಿ, ಪಕ್ಷೇತರ ಅಭ್ಯರ್ಥಿಗಳಾಗಿ ಬೀರೇಶ್, ಪಿ. ಎಸ್. ಯಡಿಯೂರಪ್ಪ ಹಾಗೂ ಉಮೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಹೆಚ್.ಡಿ.ಕೋಟೆ ವಿಧಾನ ಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಾರ್ಟಿಯಿಂದ ನಾಗೇಶ.ಹೆಚ್.ಎಂ. ಜನತಾದಳ (ಜಾತ್ಯತೀತ) ಪಕ್ಷದಿಂದ ಸಿ.ಜಯಪ್ರಕಾಶ್ (02), ಸಮಾಜವಾದಿ ಜನತಾ ಪಾರ್ಟಿಯಿಂದ ಕೆ.ವಿ. ರಾಜು, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಅನಿಲ್ ಕುಮಾರ್ ಸಿ.(02), ಪಕ್ಷೇತರ ಅಭ್ಯರ್ಥಿಗಳಾಗಿ ಎ.ಎಂ. ಬಾಬು, ಗಿರಿಜಾಂಬ ಅವರು ನಾಮಪತ್ರ ಸಲ್ಲಿಸಿದ್ದಾರೆ.
ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ದರ್ಶನ್ ಡಿ ಅವರು (04) ನಾಮಪತ್ರ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಎಸ್. ಹರೀಶ್, ಜನತಾದಳ (ಜಾತ್ಯತೀತ) ಪಕ್ಷದಿಂದ ಜಿ.ಟಿ. ದೇವೇಗೌಡ (02), ಸಮಾಜವಾದಿ ಜನತಾ ಪಾರ್ಟಿಯಿಂದ ಮೆಹುಲ್ ಜೆ. ಪಟೇಲ್, ಅಮ್ ಆದ್ಮಿ ಪಾರ್ಟಿಯಿಂದ ಕಿರಣ್ ನಾಗೇಶ್ ಕಲ್ಯಾಣಿ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಎಸ್. ಸಿದ್ದೇಗೌಡ (02), ಪಕ್ಷೇತರ ಅಭ್ಯರ್ಥಿಯಾಗಿ ಬಿ. ಪ್ರಕಾಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಅಮ್ ಆದ್ಮಿ ಪಾರ್ಟಿಯಿಂದ ಎ.ಎಸ್. ಸತೀಶ್, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯಿಂದ ಲಿಂಗರಾಜು ಎಂ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದಿಂದ ಎಂ.ಕೆ.ಸೋಮಶೇಖರ್, ಪಕ್ಷೇತರ ಅಭ್ಯರ್ಥಿಯಾಗಿ ಎ.ಎಸ್.ಸತೀಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯಿಂದ ಎಲ್. ನಾಗೇಂದ್ರ (02), ಕರ್ನಾಟಕ ರಾಷ್ಟ್ರ ಸಮಿತಿಯಿಂದ ಡಿ.ಪಿ.ಕೆ. ಪರಮೇಶ್, ಕಂಟ್ರಿ ಸಿಟಿಜನ್ ಪಾರ್ಟಿಯಿಂದ ಎಂ. ಪಂಚಲಿಂಗು ಅವರು ನಾಮಪತ್ರ ಸಲ್ಲಿಸಿದ್ದಾರೆ.
ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯಿಂದ ಎಸ್.ಸತೀಶ್ ಸಂದೇಶ್ ಸ್ವಾಮಿ (03), ರಿಪಬ್ಲಿಕನ್ ಪಾರ್ಟಿ ಆಪ್ ಇಂಡಿಯಾ (ಕರ್ನಾಟಕ) ಇಂದ ವಿನೋದ್.ಎಂ.ಚಾಕೊ, ಪಕ್ಷೇತರ ಅಭ್ಯರ್ಥಿಗಳಾಗಿ ಲಿಂಗರಾಜು ಎಂ, ವಿ. ಗಿರಿದರ್ ಅವರು ಅವರು ನಾಮಪತ್ರ ಸಲ್ಲಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಜನತಾ ಪಾರ್ಟಿ (ಕರ್ನಾಟಕ)ಯಿಂದ ಕೆ. ನಾಗೇಶ್ ನಾಯ್ಕ, ಇಂಡಿಯನ್ ನ್ಯೂ ಕಾಂಗ್ರೆಸ್‍ನಿಂದ ಗುರುಲಿಂಗಯ್ಯ, ಭಾರತೀಯ ಜನತಾ ಪಾರ್ಟಿಯಿಂದ ವಿ. ಸೋಮಣ್ಣ (02), ಕನ್ನಡ ದೇಶದ ಪಕ್ಷದಿಂದ ಅರುಣ್ ಸಿಂಗ್ ಅವರು ನಾಮಪತ್ರ ಸಲ್ಲಿಸಿದ್ದಾರೆ.
ತಿ.ನರಸೀಪುರ ವಿಧಾನ ಸಭಾ ಕ್ಷೇತ್ರದಿಂದ ಜನತಾದಳ (ಜಾತ್ಯತೀತ) ಪಕ್ಷದಿಂದ ಅಶ್ವಿನ್ ಕುಮಾರ್ ಎಂ, ಅಮ್ ಆದ್ಮಿ ಪಾರ್ಟಿಯಿಂದ ಸಿದ್ದರಾಜು ಎಂ, ಭಾರತೀಯ ಜನತಾ ಪಾರ್ಟಿಯಿಂದ ಡಾ. ಎಂ. ರೇವಣ್ಣ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಬಿ ವೈ ವಿಜಯೇಂದ್ರ ಬಳಿ 103 ಕೋಟಿ ಮೌಲ್ಯದ ಆಸ್ತಿ.. ಬಂಗಾರಪ್ಪ ಪುತ್ರರು ಕೋಟಿ ಕೋಟಿ ಒಡೆಯರು