ETV Bharat / state

ಮೈಸೂರು: ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು, ಇಬ್ಬರು ಸ್ಥಳದಲ್ಲೇ ಸಾವು - ಮೈಸೂರಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು

ಮೈಸೂರಲ್ಲಿ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು
Car collides with tree
author img

By

Published : Feb 8, 2021, 9:28 AM IST

ಮೈಸೂರು: ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೆಚ್.ಡಿ.ಕೋಟೆ ತಾಲೂಕಿನ ಅಲತ್ತೂರು ಗ್ರಾಮದ ಶಿವ(34), ಬೋಗಾದಿ ನಿವಾಸಿ ನಂದನ್(24) ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಇವರಿಬ್ಬರು ಹೆಚ್.ಡಿ. ಕೋಟೆಯಲ್ಲಿ ಕೆಲಸ ಮುಗಿಸಿಕೊಂಡು ತಡರಾತ್ರಿ ಮೈಸೂರಿಗೆ ಹಿಂತಿರುಗುತ್ತಿದ್ದರು. ಈ ವೇಳೆ ಜಯಪುರ ಹೋಬಳಿಯ ಉದ್ಬೂರು ಗೇಟ್ ಬಳಿ ಕಾರು ನಿಯಂತ್ರಣ ಕಳೆದುಕೊಂಡು ರಭಸವಾಗಿ ಮರಕ್ಕೆ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರ ಪ್ರಾಣಪಕ್ಷಿ ಸ್ಥಳದಲ್ಲೇ ಹಾರಿಹೋಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಮೃತದೇಹವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿದ್ದಾರೆ. ಈ‌ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.