ಮೈಸೂರು: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ ನಡೆದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಹುಣಸೇವಾಡಿ ಗ್ರಾಮದ ರಘು ಮೃತ ದುರ್ದೈವಿ. ಮುಂಬದಿಯಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.