ಮೈಸೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಹುಣಸೂರು ಮಾರ್ಗದ ಬಿಳಿಕೆರೆ ಸಮೀಪದ ಗುಡ್ಡೇ ಬಸವೇಶ್ವರ ದೇವಸ್ಥಾನದ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಕೇರಳ ಮೂಲದ ಒಬ್ಬ ವ್ಯಕ್ತಿ ಹಾಗೂ ಒಬ್ಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೈಸೂರಿನಿಂದ ಹುಣಸೂರು ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿದ್ದಾಗ, ಹುಣಸೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು, ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಘಟನೆ ಕುರಿತು ಬಿಳಿಕೆರೆ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡಿದ್ದಾರೆ.