ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ದಾಳಿ ಮಾಡಿರುವುದರಿಂದ, ಮೈಸೂರಿನ ಇಟ್ಟಿಗೆ ಗೂಡಿನಲ್ಲಿರುವ ಡಿಕೆಶಿ ಅವರ ಮಾವನ ಮನೆಯವರು ಆತಂಕಕ್ಕೀಡಾಗಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ಸಂಬಂಧಿಸಿದಂತೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಡಿ.ಕೆ.ಶಿ ಅವರ ಅತ್ತೆ ಹಾಗೂ ಸೊಸೆ ನಿರಾಕರಿಸಿದರು.
ಕೆಲ ತಿಂಗಳ ಹಿಂದೆ ಡಿಕೆಶಿ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದಾಗ, ಅವರ ಮಾವ ತಿಮ್ಮಯ್ಯ ಅವರ ಮನೆ ಮೇಲೂ ಐಟಿ ದಾಳಿ ಮಾಡಿ ಪರಿಶೀಲನೆ ನಡೆಸಿರುವುದನ್ನು ಇಲ್ಲಿ ಸ್ಮರಿಸಬಹುದು.