ಮೈಸೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ವಿಜಯನಗರದ ನಾಲ್ಕನೇ ಹಂತದ ೪ನೇ ಕ್ರಾಸ್ ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿಯ ಮೇರೆಗೆ ಮೈಸೂರು ನಗರ ಸಿಸಿಬಿ ಮತ್ತು ವಿಜಯನಗರ ಪೊಲೀಸರು ಮನೆಗೆ ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದು, ಅಸ್ಸೋಂ ಮೂಲದ ಮತ್ತು ಮೈಸೂರು ಮೂಲದ ಒಟ್ಟು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿಸಲಾದ ಮಹಿಳೆಯು ಈ ಹಿಂದೆ 2019ರಲ್ಲಿ ಹೂಟಗಳ್ಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಸಿಸಿಬಿ ಪೊಲೀಸರು ಬಂಧಿಸಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಈಕೆಯನ್ನು ಜೈಲಿಗೆ ಕಳುಹಿಸಿದ್ದರು. ಮತ್ತೆ ದಂಧೆಯಲ್ಲಿ ತೊಡಗಿ ಈಗ ಮತ್ತೆ ಜೈಲು ಸೇರಿದ್ದಾಳೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಹೈಟೆಕ್ ವೇಶ್ಯಾವಾಟಿಕೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ನಾಲ್ವರ ಬಂಧನ