ETV Bharat / state

ಕೇಂದ್ರ ಸರ್ಕಾರದ ನೀತಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಈಶ್ವರ್ ಖಂಡ್ರೆ ಟೀಕೆ

ಕೇಂದ್ರ ಸರ್ಕಾರದ ನೀತಿಯಿಂದ ದಿನೇ ದಿನೇ ದೇಶದ ಅರ್ಥ ವ್ಯವಸ್ಥೆ ಕುಸಿಯುತ್ತಿದೆ‌. ದೇಶದಲ್ಲಿ ಉಂಟಾಗಿರುವ ಆರ್ಥಿಕ ಪರಿಸ್ಥಿತಿ ಬಗ್ಗೆ ಚರ್ಚಿಸಲು ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
author img

By

Published : Sep 8, 2019, 4:49 PM IST

ಮೈಸೂರು: ನೋಟು ಅಮಾನ್ಯೀಕರಣ, ಜಿಎಸ್​ಟಿ ಅನುಷ್ಠಾನ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದು ಆರ್ಥಿಕ ತಜ್ಞರ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ರು.

ಕೇಂದ್ರ ಸರ್ಕಾರದ ನೀತಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಈಶ್ವರ್ ಖಂಡ್ರೆ

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ನೀತಿಯಿಂದ ದಿನೇ ದಿನೇ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದೆ‌. ಕೈಗಾರಿಕೆಗಳು ಮುಚ್ಚುತ್ತಿವೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಟೀಕಿಸಿದ್ರು.

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದ್ದು, ಪ್ರತಿಪಕ್ಷ ನಾಯಕರನ್ನು ಬಂಧಿಸುವ ಮೂಲಕ ಭಯ ಹುಟ್ಟಿಸುತ್ತಿದೆ. ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಪಿ.ಚಿದಂಬರಂ ಹಾಗೂ ಡಿಕೆಶಿ ಅವರನ್ನು ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದ್ರು.

ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡುತ್ತಿಲ್ಲ. ಜನ ಸತ್ತ ಮೇಲೆ ಪರಿಹಾರ ಕೊಡುತ್ತಾರಾ? ಎಲ್ಲಾ ಮುಗಿದ ಮೇಲೆ ತಿಥಿ ಮಾಡಲು ಬರುತ್ತೀರಾ ಎಂದು ಪ್ರಶ್ನಿಸಿದರು.

17 ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಗೆ ಪಕ್ಷ ಸಿದ್ದವಾಗಿದೆ. ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತಾರೆ ಎಂದರು.

Intro:ಈಶ್ವರ್ ಖಂಡ್ರೆ

Body:ಈಶ್ವರ್ ಖಂಡ್ರೆ

Conclusion:ಕೇಂದ್ರ ಸರ್ಕಾರದ ನೀತಿಯಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಈಶ್ವರ್ ಖಂಡ್ರೆ
ಮೈಸೂರು: ನೋಟು ಅಮಾನ್ಯೀಕರಣ, ಜಿಎಸ್ ಟಿ ಅನುಷ್ಠಾನ ತಂದದ್ದರಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಆರ್ಥಿಕ ತಜ್ಞರ ವರದಿಯಲ್ಲಿ ಹೇಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನೀತಿಯಿಂದ ದಿನೇ ದಿನೇ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದೆ‌.ಕೈಗಾರಿಕೆಗಳು ಮುಚ್ಚುತ್ತಿವೆ.ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಎಂದರು.
ದೇಶದಲ್ಲಿ ಉಂಟಾಗಿರುವ ಆರ್ಥಿಕ ಪರಿಸ್ಥಿತಿದ ಬಗ್ಗೆ ಚರ್ಚಿಸಲು ಕೂಡಲೇ ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದರು.
ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದ್ದು, ಪ್ರತಿಪಕ್ಷ ನಾಯಕರನ್ನು ಬಂಧಿಸುವ ಭಯ ಹುಟ್ಟಿಸುತ್ತಿದೆ.ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ.ಪಿ.ಚಿದಂಬರಂ ಹಾಗೂ ಡಿ.ಕೆ.ಶಿ ಅವರನ್ನು ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ನೆರವು ನೀಡುತ್ತಿಲ್ಲ.ಜನ ಸತ್ತ ಮೇಲೆ ಪರಿಹಾರ ಕೊಡುತ್ತಾರಾ? ಎಲ್ಲ ಮುಗಿದ ಮೇಲೆ ತಿಥಿ ಮಾಡಲು ಬರುತ್ತೀರಾ ಎಂದು ಪ್ರಶ್ನಿಸಿದರು.
17 ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಗೆ ಪಕ್ಷ ಸಿದ್ದವಾಗಿದೆ. ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತಾರೆ ಎಂದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.