ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಫಲಿತಾಂಶ ಇನ್ನೇನು ಹೊರಬೀಳಲಿದ್ದು, ಎದುರಾಳಿ ಅಭ್ಯರ್ಥಿಗಿಂದ ಭಾರಿ ಮತಗಳ ಹಿನ್ನಡೆ ಅನುಭವಿಸುತ್ತಿರುವ ಮೈತ್ರಿ ಅಭ್ಯರ್ಥಿ ಸಿ.ಹೆಚ್. ವಿಜಯಶಂಕರ್ ಮತ ಎಣಿಕೆ ಕೇಂದ್ರದಿಂದ ಬೇಸರದಿಂದ ಹೊರ ನಡೆದರು.
ಮತ ಎಣಿಕೆಯಲ್ಲಿ ಹತ್ತು ಸುತ್ತುಗಳು ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ 76,762 ಮತಗಳ ಮುನ್ನಡೆ ಪಡೆದಿದ್ದಾರೆ ಈ ಹಿನ್ನಲೆಯಲ್ಲಿ ಹಿನ್ನಡೆ ಅನುಭವಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್ ವಿಜಯಶಂಕರ್ ಮತ ಎಣಿಕೆ ಕೇಂದ್ರದಿಂದ ಹೊರ ನಡೆದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.