ಮೈಸೂರು: ಕಾಂಗ್ರೆಸ್ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋತ ಬಳಿಕ ಇದೇ ಮೊದಲ ಬಾರಿಗೆ ಸಿ.ಹೆಚ್.ವಿಜಯಶಂಕರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ವೇದಿಕೆ ಹಂಚಿಕೊಂಡರು.
ಓದಿ: ದೇಶ ವಿರೋಧಿ ಹೇಳಿಕೆ ನೀಡಿದ ಪಿಎಫ್ಐ ಮುಖಂಡರ ವಿರುದ್ಧ ಕ್ರಮ: ಗೃಹ ಸಚಿವ ಬೊಮ್ಮಾಯಿ
ಕೆ.ಆರ್.ನಗರ ತಾಲೂಕಿನ ಗಂಧನಹಳ್ಳಿ ಗ್ರಾಮದಲ್ಲಿ ಬೀರಲಿಂಗೇಶ್ವರ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ಸಿ.ಹೆಚ್.ವಿಜಯಶಂಕರ್ ಕಾಣಿಸಿಕೊಂಡಿದ್ದಾರೆ. ಬಿಜೆಪಿಯಲ್ಲಿದ್ದ ವಿಜಯಶಂಕರ್ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು.
ಸೋಲು ಕಂಡ ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಮತ್ತೆ ಬಿಜೆಪಿಗೆ ಸೇರ್ಪಡೆಯಾದರು. ಸೋತ ಬಳಿಕ ಸಿದ್ದರಾಮಯ್ಯ ಅವರೊಂದಿಗೆ ಇದೇ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದಾರೆ.
ಟಗರು ಮೇಲೆ ಮುನಿಸು, ಗೈರಾದ ಹಳ್ಳಿಹಕ್ಕಿ:
ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆಗೆ ಕುರುಬ ಸಮುದಾಯದ ನಾಯಕರು ವೇದಿಕೆ ಹಂಚಿಕೊಳ್ಳದಿರುವುದು ಕಂಡು ಬಂದಿದೆ. ವೇದಿಕೆ ಕಾರ್ಯಕ್ರಮದ ಮುಂಚಿತವಾಗಿಯೇ ಹೆಚ್.ವಿಶ್ವನಾಥ್ ಗ್ರಾಮಕ್ಕೆ ಭೇಟಿ ಕೊಟ್ಟು ಹೋಗಿದ್ದಾರೆ. ಅಲ್ಲದೇ ಕೆಆರ್ ನಗರ ತಾಲೂಕಿನಲ್ಲಿ ಇದ್ದರೂ ವೇದಿಕೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗಿದೆ.
ಜೊತೆಗೆ ಕೆ.ಎಸ್.ಈಶ್ವರಪ್ಪ, ಎಂಟಿಬಿ ನಾಗರಾಜ್ ಕೂಡ ಗೈರಾಗಿದ್ದು, ಸಿದ್ದರಾಮಯ್ಯ ಜೊತೆಗೆ ಅಂತರ ಕಾಯ್ದುಕೊಂಡಿದ್ದಾರೆ. ಕಳೆದ ಬಾರಿ ನಡೆದ ಕಾರ್ಯಕ್ರಮದಲ್ಲಿ ಈಶ್ವರಪ್ಪ, ವಿಶ್ವನಾಥ್ ಅವರು ಸಿದ್ದರಾಮಯ್ಯ ಜೊತೆ ವೇದಿಕೆ ಹಂಚಿಕೊಂಡಿದ್ದರು.
ಈ ಬಾರಿಯ ಕಾರ್ಯಕ್ರಮದಲ್ಲಿ ಸಿದ್ದು ಜೊತೆಗೆ ಹೆಚ್.ಎಂ.ರೇವಣ್ಣ, ಆರ್.ಧರ್ಮಸೇನ, ವಿಜಯಶಂಕರ್, ಜಿ.ಟಿ.ದೇವೇಗೌಡ ಪುತ್ರ ಜಿ.ಡಿ.ಹರೀಶ್‌ಗೌಡ ಭಾಗಿಯಾಗಿದ್ದಾರೆ.