ETV Bharat / state

ರಜಾ ದಿನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ನಿಷೇಧ: ಜಿಲ್ಲಾಧಿಕಾರಿ

author img

By

Published : Jun 12, 2020, 1:03 PM IST

ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಹಾಗೂ ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯಗಳಿಗೆ ಸಾರ್ವಜನಿಕ ರಜಾ ದಿನ ಹಾಗೂ ವಾರದ ಕೊನೆ ದಿನಗಳಾದ ಶನಿವಾರ ಮತ್ತು ಭಾನುವಾರ ಸಾರ್ವಜನಿಕ ದರ್ಶನಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Chamundi temple
Chamundi temple

ಮೈಸೂರು: ರಜಾ ದಿನಗಳು ಹಾಗೂ ವಾರದ ಅಂತ್ಯದಲ್ಲಿ ಚಾಮುಂಡಿ ಹಾಗೂ ಶ್ರೀ ಕಂಠೇಶ್ವರಸ್ವಾಮಿ ದರ್ಶನಕ್ಕೆ ನಿಷೇಧವನ್ನು ಹೇರಿ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಆದೇಶ ಹೊರಡಿಸಿದ್ದಾರೆ.

ಲಾಕ್‌ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳು ಹಾಗೂ ಆಧ್ಯಾತ್ಮಿಕ ಕೇಂದ್ರಗಳನ್ನು ತೆರೆಯಲು ಷರತ್ತುಗಳನ್ನು ವಿಧಿಸಿ ಜೂನ್ 8 ರಂದು ಜಿಲ್ಲಾಧಿಕಾರಿಗಳು ಇವುಗಳನ್ನು ತೆರೆಯಲು ಅನುಮತಿ ನೀಡಿದ್ದರು. ಆದರೆ ಕೊರೊನಾ ಸೋಂಕು ಹೆಚ್ಚಾದ ಭೀತಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಹಾಗೂ ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯಗಳಿಗೆ ಸಾರ್ವಜನಿಕ ರಜಾ ದಿನ ಹಾಗೂ ವಾರದ ಕೊನೆ ದಿನಗಳಾದ ಶನಿವಾರ ಮತ್ತು ಭಾನುವಾರ ಸಾರ್ವಜನಿಕ ದರ್ಶನಕ್ಕೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ 1 ಗಂಟೆಯವರಗೆ, ಮಧ್ಯಾಹ್ನ 3.30 ರಿಂದ 5.30 ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.