ಮೈಸೂರು: ಕಳೆದ ಒಂದು ತಿಂಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ತಿಂದು ತೇಗುತ್ತಾ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.
ಹುಣಸೂರು ತಾಲೂಕಿನಲ್ಲಿ ಚಿಕ್ಕಕಾಡನಹಳ್ಳಿ ಗ್ರಾಮದಲ್ಲಿ ರೈತ ಚಂದ್ರಶೇಖರ್ ಎಂಬುವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಆಹಾರ ಅರಸಿ ಬಂದ ಹೆಣ್ಣು ಚಿರತೆ ಸೆರೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ನಾಗರಹೊಳೆ ಅರಣ್ಯಕ್ಕೆ ಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಸಾಕಷ್ಟು ಚಿರತೆಗಳು ಇರುವ ಆತಂಕ ಗ್ರಾಮಸ್ಥರಲ್ಲಿದ್ದು, ಮತ್ತೆ ಬೋನು ಇರಿಸುವಂತೆ ಮನವಿ ಮಾಡಿದ್ದಾರೆ.