ETV Bharat / state

ನಿಖಿಲ್​ ತಂದೆಯಾಗಿ ಅಲ್ಲ, ಸಿಎಂ ಆಗಿ ಕೆಲ್ಸ ಮಾಡಿ... ಹೆಚ್​ಡಿಕೆ ವಿರುದ್ಧ  ಸುರೇಶ್ ಕುಮಾರ್ ವಾಗ್ದಾಳಿ - Mysore

ಮೈತ್ರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರುವ ಶಾಸಕ ಸುರೇಶ್ ಕುಮಾರ್, ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೋ ಇಲ್ಲವೋ ಎಂಬ ಪ್ರಶ್ನೆ  ಮೂಡುತ್ತಿದೆ ಎಂದಿದ್ದಾರೆ.

ಮೈತ್ರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಸುರೇಶ್ ಕುಮಾರ್
author img

By

Published : Apr 4, 2019, 1:49 PM IST

Updated : Apr 4, 2019, 1:56 PM IST

ಮೈಸೂರು: ಮುಖ್ಯಮಂತ್ರಿಗಳು ನಮ್ಮ ರಾಜ್ಯದಲ್ಲಿರುವುದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿಯ ತಂದೆಯಾಗಿ ಮಾತ್ರ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.

ಮೈತ್ರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಸುರೇಶ್ ಕುಮಾರ್

ಮೈಸೂರಿನ ನ್ಯಾಯಾಲಯದ ಆವರಣದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಪ್ರತಾಪ್​ ಸಿಂಹ ಅವರ ಪರ ಮತಯಾಚನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೋ ಇಲ್ಲವೋ ಎಂಬ ಪ್ರಶ್ನೆ ಮೂಡುತ್ತದೆ. ನಮ್ಮ ರಾಜ್ಯದಲ್ಲಿರುವುದು ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ತಂದೆಯಾಗಿ ಮಾತ್ರ ಇದ್ದಾರೆ ಎಂದು ವಾಗ್ದಾಳಿ ನೆಡೆಸಿದರು.

ರಾಜ್ಯದಲ್ಲಿ ನೀರಿನ ಹಾಹಾಕಾರ ಸೇರಿದಂತೆ ಬೇರೆ ಬೇರೆ ಸಮಸ್ಯೆಗಳಿವೆ. ಆ ಕಡೆ ಮುಖ್ಯಮಂತ್ರಿ ಕುಮಾರಸ್ವಾಮಿ ಗಮನ ಹರಿಸಬೇಕು. ಕೇವಲ ಮಂಡ್ಯದಲ್ಲಿ ನಿಖಿಲ್ ತಂದೆಯಾಗಿ ಕೆಲಸ ಮಾಡಿದರೆ ಸಾಲದು, ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

ಇನ್ನು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧವಾಗಿ ಬಳಸುತ್ತಿರುವ ಪದ ಸರಿಯಾಗಿಲ್ಲ. ಅವರ ಬಗ್ಗೆ ಗೌರವದಿಂದ ಮಾತನಾಡಿ ಎಂದು ತಿಳಿಹೇಳಿದರು.

Intro:ಮೈಸೂರು: ನಮ್ಮ ರಾಜ್ಯದಲ್ಲಿರುವುದು ಮಂಡ್ಯ ಲೋಕಸಭಾ ಅಭ್ಯರ್ಥಿಯ ತಂದೆ ಮಾತ್ರ ಮುಖ್ಯಮಂತ್ರಿಗಳು ಕಾಣೆಯಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುರೇಶ್ ಕುಮಾರ್ ಮೈಸೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.

Body:ಇಂದು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ಪರ ಮತಯಾಚನೆಯನ್ನು ಮೈಸೂರಿನ ನ್ಯಾಯಾಲಯದ ಆವರಣದಲ್ಲಿ ಮಾಡಿದ ಸುರೇಶ್ ಕುಮಾರ್ ನಂತರ ಮಾಧ್ಯಮಗಳ ಜೊತೆ ಮಾತನಾಡಿ ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಇದ್ದಾರೆಯೋ ಇಲ್ಲವೋ ಎಂಬ ಪ್ರಶ್ನೆ ಮೂಡುತ್ತದೆ.
ನಮ್ಮ ರಾಜ್ಯದಲ್ಲಿರುವುದು ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ತಂದೆ ಮಾತ್ರ ಮುಖ್ಯಮಂತ್ರಿಗಳು ಕಾಣೆಯಾಗಿದ್ದಾರೆ ಎಂದು ವಾಗ್ದಾಳಿ ನೆಡೆಸಿದ ಸುರೇಶ್ ಕುಮಾರ್ ರಾಜ್ಯದಲ್ಲಿ ನೀರಿನ ಸಮಸ್ಯೆ ಸೇರಿದಂತೆ ಬೇರೆ ಬೇರೆ ಸಮಸ್ಯೆಗಳು ಇವೇ ಆ ಕಡೆ ಮುಖ್ಯಮಂತ್ರಿಗಳು ಗಮನ ಹರಿಸಬೇಕು ಕೇವಲ ಮಂಡ್ಯದಲ್ಲಿ ನಿಖಿಲ್ ತಂದೆಯಾಗಿ ಕೆಲಸ ಮಾಡಿದರೆ ಸಾಲದು.
ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ ಎಂದರು.
ಇನ್ನೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ದವಾಗಿ ಬಳಸುತ್ತಿರುವ ಪದ ಸರಿಯಾಗಿಲ್ಲ ಅವರ ವಿರುದ್ಧ ಸರಿಯಾಗಿ ಪದ ಬಳಸಬೇಕೆಂದು ಹೇಳಿದ ಸುರೇಶ್ ಕುಮಾರ್ ರಾಜ್ಯದಲ್ಲಿ ಈ ಬಾರಿ ಬಿಜೆಪಿ ೨೨ ಸ್ಥಾನ ಗಳಿಸುತ್ತದೆ ಎಂದ ಅವರು ಮೈಸೂರಿನಲ್ಲಿ ಮತ್ತೊಮ್ಮೆ ಕಮಲ ಅರಳುತ್ತದೆ ಎಂದರು.

Conclusion:
Last Updated : Apr 4, 2019, 1:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.