ETV Bharat / state

ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ - ನಂದಿಧ್ವಜಕ್ಕೆ ಪೂಜೆ

ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ  ಯಡಿಯೂರಪ್ಪ ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಾಯಿತು.
author img

By

Published : Oct 8, 2019, 3:49 PM IST

ಮೈಸೂರು: ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ದಸರಾ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ

ಅರಮನೆಯ ಕೋಟೆ ಆಂಜನೇಯ ದೇವಾಲಯದ ಮುಂಭಾಗದಲ್ಲಿ ನಂದಿ ಧ್ವಜಕ್ಕೆ ಮಕರ ಲಗ್ನದಲ್ಲಿ 2.13 ರಿಂದ 2.58ರವರೆಗೆ ಜರಗುವ ಶುಭ ಈ ಲಗ್ನದಲ್ಲಿ ಸಿಎಂ ಯಡಿಯೂರಪ್ಪ ನಂದಿಧ್ವಕ್ಕೆ ಪೂಜೆ ಸಲ್ಲಿಸಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.

ರಾಜ್ಯದ ಕಲೆ, ಸಂಸ್ಕೃತಿ, ಸಾಧನೆಯ ಮಹಾಪುರುಷರ ಭಾವಚಿತ್ರ ಇರುವ 9 ಸ್ತಬ್ಧ ಚಿತ್ರಗಳು ಹಾಗೂ ಹಲವಾರು ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿವೆ.

4.31 ರಿಂದ 4.57 ರವರೆಗೆ ಸಲ್ಲುವ ಶುಭ ಕುಂಭ ಲಗ್ನದ ಚಿನ್ನದ ಅಂಬಾರಿಯಲ್ಲಿ ಕೂರುವ ತಾಯಿ ಚಾಮುಂಡೇಶ್ವರಿ ದೇವಿಗೆ ಸಿಎಂ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಲಿದ್ದಾರೆ. ನಂತರ ಅರಮನೆಯ ಆವರಣದಿಂದ ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.