ETV Bharat / state

ಮೈಸೂರು: ವಾಂತಿ, ಭೇದಿಯಿಂದ 14 ಮಂದಿ ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಹೆಚ್.ಡಿ.ಕೋಟೆ ತಾಲೂಕಿನ ಮಹದೇಶ್ವರ ಕಾಲೋನಿಯ ಮಕ್ಕಳು ಕಲುಷಿತ ನೀರು ಅಥವಾ ಆಹಾರ ಸೇವಿಸಿ ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಶಾಲೆಯಲ್ಲಿ ಹಾಲು ಕುಡಿದ ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.

children-admitted-to-hospital-after-illness-in-mysore
ಆಸ್ಪತ್ರೆಗೆ ಬಂದ ಮಕ್ಕಳು
author img

By

Published : Nov 18, 2021, 10:41 PM IST

ಮೈಸೂರು: ಹೆಚ್‌‌.ಡಿ ಕೋಟೆ ತಾಲೂಕಿನಲ್ಲಿ ಕಳೆದ ರಾತ್ರಿಯಿಂದಲೂ ಸುಮಾರು 14 ಮಂದಿ ಶಾಲಾ ಮಕ್ಕಳು ವಾಂತಿ, ಭೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ.

ಅಸ್ವಸ್ಥರಾದ ಮಕ್ಕಳ ಬಗ್ಗೆ ಪೋಷಕರ ಮಾತು

ಹೆಚ್.ಡಿ.ಕೋಟೆ ತಾಲೂಕಿನ ಮಹದೇಶ್ವರ ಕಾಲೋನಿಯ ಮಕ್ಕಳು ಕಲುಷಿತ ನೀರು ಅಥವಾ ಆಹಾರ ಸೇವಿಸಿ ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಶಾಲೆಯಲ್ಲಿ ಹಾಲು ಕುಡಿದ ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಆರೋಗ್ಯಾಧಿಕಾರಿ ಮಾಹಿತಿ ಸಂಗ್ರಹಿಸುತ್ತಿದ್ದಾಗ, ಶಿಕ್ಷಕರೊಡನೆ ಗ್ರಾಮಸ್ಥರು ಮಾತಿನ ಚಕಮಕಿ ನಡೆಸಿದ್ದಾರೆ. ಅನಂತರ ಗ್ರಾಮದ ನೀರಿನ ಮಾದರಿ ಸಂಗ್ರಹಿಸಿ ಆರೋಗ್ಯ ಇಲಾಖೆಗೆ ಪರೀಕ್ಷೆಗೆ ಕಳುಹಿಸಲಾಗಿದೆ.

ಮಕ್ಕಳ ಸ್ಥಿತಿ ಕಂಡು ಆತಂಕಗೊಂಡ ಪೋಷಕರು ತಮ್ಮ ಭುಜದ ಮೇಲೆ ಹೊತ್ತು, ಆಸ್ಪತ್ರೆ ಆವರಣದಲ್ಲಿ ಓಡಾಡಿದ್ದಾರೆ. ಆಗ ಮಕ್ಕಳ ಆರೋಗ್ಯದ ಬಗ್ಗೆ ಭಯಪಡದಂತೆ ವೈದ್ಯರು ಪೋಷಕರಿಗೆ ಧೈರ್ಯ ತುಂಬಿದ ಪ್ರಸಂಗ ನಡೆದಿದೆ.

ಇದನ್ನೂ ಓದಿ: ಶಿವಮೊಗ್ಗ: ಮದುವೆ ಸಮಾರಂಭದಲ್ಲಿ ಊಟ ಮಾಡಿದ್ದ ಹಲವರಿಗೆ ವಾಂತಿ, ಭೇದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.