ETV Bharat / state

ಮೈಸೂರು: ಮಕ್ಕಳ ದಸರಾ ಉದ್ಘಾಟಿಸಿದ ಬಿಸಿ ನಾಗೇಶ್​

ನಾಡಹಬ್ಬ ಮೈಸೂರು ದಸರಾ ನಿಮಿತ್ತ ನಗರದ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿರುವ ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಸಚಿವ ಬಿಸಿ ನಾಗೇಶ್​ ಉದ್ಘಾಟಿಸಿದರು.

children-dasara-at-mysore
ಮೈಸೂರು ದಸರಾ 2022 : ಮಕ್ಕಳ ದಸರಾ ಉದ್ಘಾಟಿಸಿದ ಬಿಸಿ ನಾಗೇಶ್​
author img

By

Published : Sep 29, 2022, 5:46 PM IST

Updated : Sep 29, 2022, 7:16 PM IST

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ನಿಮಿತ್ತ ಏರ್ಪಡಿಸಲಾಗಿರುವ ಮಕ್ಕಳ ದಸರಾ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮತ್ತು ಸಕಾಲ ಇಲಾಖೆ ಸಚಿವರಾದ ಬಿ.ಸಿ.ನಾಗೇಶ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.

ಮಕ್ಕಳ ದಸರಾ ಆಚರಣೆ : ನಗರದ ಜಗನ್ಮೋಹನ ಅರಮನೆಯಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಮಕ್ಕಳ ದಸರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ನಂತರ ದಸರಾ ಹಬ್ಬವು ತನ್ನ ಹಳೆಯ ಮೆರುಗು ಪಡೆದುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಅದರಂತೆ ವಿದ್ಯಾರ್ಥಿಗಳಿಗೂ ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಇಂತಹ ವೇದಿಕೆ ಅಗತ್ಯವಿದ್ದು, ಎಲ್ಲ ಮಕ್ಕಳಿಗೂ ಸಮಾನ ಅವಕಾಶ ನೀಡಲು ಸರ್ಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಬಳಿಕ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿರುವ ನನ್ನಮ್ಮ ಸೂಪರ್ ಸ್ಟಾರ್ ಹಾಗೂ ಗಿಚ್ಚಿ ಗಿಲಿಗಿಲಿ‌ ಖ್ಯಾತಿಯ ಬಾಲ ಪ್ರತಿಭೆ ವಂಶಿಕಾ ಅಂಜನಿ ಕಶ್ಯಪ ಅತಿಥಿಯಾಗಿ‌ ಪಾಲ್ಗೊಂಡು, ಕನ್ನಡ ಚಿತ್ರದ ರಾ..ರಾ.. ರಕ್ಕಮ್ಮ ಹಾಡಿಗೆ ನೃತ್ಯ ಮಾಡಿದರು. ಈ ಮೂಲಕ ನೆರೆದಿದ್ದ ವಿದ್ಯಾರ್ಥಿಗಳನ್ನು ಮನರಂಜಿಸಿದರು. ಜೊತೆಗೆ ಗಿನ್ನಿಸ್ ವರ್ಲ್ಡ್ ಆಫ್ ರೆಕಾರ್ಡ್ ದಾಖಲೆ ಮಾಡಿರುವ ಧವನಿ ಎಂಬ ಪುಟ್ಟ ಬಾಲಕಿ 224 ವಿಧಾನ ಸಭಾ ಕ್ಷೇತ್ರದ ಹೆಸರನ್ನು ಒಂದು ನಿಮಿಷದಲ್ಲಿ ಹೇಳುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದರು.

ಮೈಸೂರು: ಮಕ್ಕಳ ದಸರಾ ಉದ್ಘಾಟಿಸಿದ ಬಿಸಿ ನಾಗೇಶ್​

ವಿಜ್ಞಾನ ಹಾಗೂ ಕರಕುಶಲ ವಸ್ತು ಪ್ರದರ್ಶನ: ಮಕ್ಕಳ ದಸರಾ ನಿಮಿತ್ತ ಜಗನ್ಮೋಹನ ಅರಮನೆ ಆವರಣದಲ್ಲಿ ಏರ್ಪಡಿಸಲಾಗಿರುವ ವಿಜ್ಞಾನ ಹಾಗೂ ಕರಕುಶಲ ವಸ್ತು ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಮತ್ತು ಸಹಕಾರ‌ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು.

ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಹೆಚ್.ಡಿ.ಕೋಟೆ ಸರ್ಕಾರಿ ಶಾಲಾ ಮಕ್ಕಳು ಶಿಕ್ಷಣದಲ್ಲಿ ಚಿತ್ರಕಲೆಯ ಉಪಯುಕ್ತತೆ, ಸರ್ಕಾರಿ ಶಾಲಾ ಮಕ್ಕಳಿಂದ ಭೌಗೋಳಿಕ ಮತ್ತು ಪ್ರಾಕೃತಿಕ ವೈಪರೀತ್ಯ ಕಾರಣಗಳು, ಪರಿಣಾಮಗಳು, ಪಿರಿಯಾಪಟ್ಟಣ ಶಾಲಾ ಮಕ್ಕಳಿಂದ ಕನ್ನಡದ ಶ್ರೇಷ್ಠ ಕವಿ ಪರಂಪರೆ, ತಿ.ನರಸೀಪುರದಿಂದ ಶಿಕ್ಷಣ ಇಲಾಖೆಯ ಪ್ರೋತ್ಸಾಹದಾಯಕ ಯೋಜನೆಗಳು, ಕೆ.ಆರ್.ನಗರದ ಶಾಲಾ‌ ಮಕ್ಕಳಿಂದ ಕಲಿಕಾ ಚೇತರಿಕೆ ಕುರಿತು, ನಂಜನಗೂಡು ಶಾಲೆಯಿಂದ ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ, ಮೈಸೂರು ದಕ್ಷಿಣ, ಉತ್ತರ‌ ಹಾಗೂ ಗ್ರಾಮಾಂತರ ವಲಯದ ಸರ್ಕಾರಿ ಶಾಲಾ ಮಕ್ಕಳಿಂದ ಯೋಗ, ಸ್ವಾಸ್ಥ್ಯ ಹಾಗೂ ಕರೋನಾ ಮುನ್ನೆಚ್ಚರಿಕೆ ಮತ್ತು ಕಲಿಕಾ ಪ್ರಕ್ರಿಯೆಯಲ್ಲಿ ವಿಜ್ಣಾನ ಮತ್ತು ತಂತ್ರಜ್ಞಾನ ವಿಷಯಗಳ ಕುರಿತು ವಸ್ತು ಪ್ರದರ್ಶನ ಆಯೋಜಿಸಲಾಗಿದೆ.

ಈ‌ ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ವೇಷಭೂಷಣ ಸ್ಪರ್ಧೆ, ಪ್ರಬಂಧ, ಆಶುಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ನೃತ್ಯ ಪ್ರದರ್ಶನ ಸೇರಿದಂತೆ ದೇಸಿ ಆಟಗಳು ನಡೆಯಲಿದೆ.

ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಜಿ.ಬಗಾದಿ ಗೌತಮ್, ಮೇಯರ್ ಶಿವಕುಮಾರ್, ಉಪಮೇಯರ್ ಡಾ.ಜಿ.ರೂಪ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್ ಅವರು ಸೇರಿದಂತೆ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ :ಮೈಸೂರು ದಸರಾ 2022: ಗ್ರಾಮೀಣ ದಸರಾಗೆ ಚಾಲನೆ

Last Updated : Sep 29, 2022, 7:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.