ಮೈಸೂರು: ಕೊರೊನಾ ವೈರಾಣು ಹರಡುವಿಕೆ ತಡೆಯುವ ಸಲುವಾಗಿ ನಗರದಲ್ಲಿಂದು ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಈ ವೇಳೆ ಸೈಕ್ಲಿಸ್ಟ್ ಒಬ್ಬ ಮಾಸ್ಕ್ ಧರಿಸದೆ ಸೈಕಲ್‌ನಲ್ಲಿ ಸಂಚರಿಸುತ್ತಿದ್ದ. ಇದನ್ನು ಕಂಡ ಪೊಲೀಸರು ವ್ಯಕ್ತಿಯನ್ನು ತಡೆದು ಮಾಸ್ಕ್ ಧರಿಸಿಕೊಳ್ಳಿ ಎಂದು ಹೇಳಿದ್ದಾರೆ.
ಈ ವೇಳೆ ಆತ ಪೊಲೀಸರಿಗೆ ನಾನು ಒಬ್ಬ ವೈದ್ಯ, ನನಗೆ ಮಾಸ್ಕ್ ಅವಶ್ಯಕತೆ ಇಲ್ಲ. ವ್ಯಾಯಾಮ ಮಾಡುವಾಗ ಮಾಸ್ಕ್ ಬೇಡವೆಂದು ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾನೆ.
ಪೊಲೀಸರು ನಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಬೇಡಿ, ದಯವಿಟ್ಟು ಮಾಸ್ಕ್ ಧರಿಸಿ ಎಂದಿದ್ದಾರೆ. ಈ ವೇಳೆ ಪೊಲೀಸರ ಮಾತು ನಿರ್ಲಕ್ಷಿಸಿ ಅವರ ವಿಡಿಯೋ ಮಾಡಲು ಮುಂದಾಗಿದ್ದಾನೆ. ಈ ವೇಳೆ ಸಾರ್ವಜನಿಕರು ಮಧ್ಯಪ್ರವೇಶಿಸಿ ಪೊಲೀಸರ ಕರ್ತವ್ಯಕ್ಕೆ ಸಹಕರಿಸಿ ಎಂದು ಬುದ್ಧಿವಾದ ಹೇಳಿ ಕಳುಹಿಸಿಕೊಟ್ಟರು.