ETV Bharat / state

ಅಧ್ಯಾಪಕರು-ವಿದ್ಯಾರ್ಥಿಗಳ ರಂಪಾಟ: ಕಾಲೇಜಿಗೆ 2 ದಿನ ರಜೆ - clash between lecturer and students in mysore

ಮೈಸೂರು ಜಿಲ್ಲೆಯ ಎಂಜಿನಿಯರಿಂಗ್ ಕಾಲೇಜಿನ ಕ್ರೀಡಾಕೂಟದಲ್ಲಿ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ನಡುವೆ ರಂಪಾಟ ನಡೆದಿದ್ದು, ಇದರಿಂದ ಕಾಲೇಜಿಗೆ 2 ದಿನ ರಜೆ ನೀಡಲಾಗಿದೆ.

clash-between-lecturer-and-students-in-mysore
ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳ ರಂಪಾಟ
author img

By

Published : Mar 3, 2020, 7:31 PM IST

ಮೈಸೂರು: ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಕೂಟದಲ್ಲಿ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ನಡುವೆ ರಂಪಾಟ ನಡೆದಿದ್ದು, ಇದರಿಂದ ಕಾಲೇಜಿಗೆ 2 ದಿನ ರಜೆ ನೀಡಲಾಗಿದೆ.

ಘಟನೆ ಹಿನ್ನೆಲೆ: ಕಾಲೇಜು ಕ್ರೀಡಾಕೂಟದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕ್ರೀಡಾಂಗಣದ ಪಕ್ಕದಲ್ಲಿ ಕುಣಿಯುತ್ತಾ ಇರುವುದನ್ನು ಕಂಡಿರುವ ಕಾಲೇಜಿನ ಕಂಪ್ಯೂಟರ್ ಸೈನ್ಸ್​​ ವಿಭಾಗದ ಅಧ್ಯಾಪಕಿಯೊಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಕ್ರೀಡೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ.

ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳ ರಂಪಾಟ

ಈ ಪ್ರತಿಭಟನೆಗೆ ಕಾಲೇಜಿನ ಅಧ್ಯಾಪಕ ನಾಗೇಂದ್ರ ಪ್ರಸಾದ್ ಎಂಬುವವರು ಬೆಂಬಲ ಸೂಚಿಸಿದ್ದಾರೆ. ಇದರಿಂದ ಕೋಪಗೊಂಡ ಅಧ್ಯಾಪಕಿ, ತನ್ನ ಗಂಡನಿಗೆ ವಿಚಾರ ತಿಳಿಸಿದ್ದಾರೆ. ಇದರಿಂದ ಕೋಪಗೊಂಡ ಅವರ ಪತಿ ಅಧ್ಯಾಪಕ ನಾಗೇಂದ್ರ ಪ್ರಸಾದ್​ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಪರಿಣಾಮ ಮತ್ತಷ್ಟು ಕೋಪಗೊಂಡ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಗಲಾಟೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶ್ವಸಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಮತ್ತು ನಾಳೆ ಕಾಲೇಜಿಗೆ ರಜೆ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.