ETV Bharat / state

ರಾಜ್ಯಾದ್ಯಂತ ಯಾವುದೇ ಮುಲಾಜಿಲ್ಲದೇ ಒತ್ತುವರಿ ತೆರವು: ಸಚಿವ ಭೈರತಿ ಬಸವರಾಜ - ಗುತ್ತಿಗೆ ಪೌರ ಕಾರ್ಮಿಕರ ಖಾಯಂ

ಮಳೆಗಾಲದಲ್ಲಿ ಸಮಸ್ಯೆ ನಿವಾರಣೆ ಮಾಡುವ ಸಲುವಾಗಿ ರಾಜ್ಯಾದ್ಯಂತ ಒತ್ತುವರಿ ತೆರವು ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.

clearance-of-encroachments-across-the-state-says-minister-byrathi-basavaraj
ರಾಜ್ಯಾದ್ಯಂತ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವು: ಸಚಿವ ಭೈರತಿ ಬಸವರಾಜ
author img

By

Published : Sep 22, 2022, 6:23 PM IST

ಮೈಸೂರು: ಬೆಂಗಳೂರು ಮಾತ್ರವಲ್ಲದೆ ರಾಜ್ಯಾದ್ಯಂತ ಒತ್ತುವರಿಯಾಗಿರುವ ರಾಜಕಾಲುವೆ, ಕೆರೆ, ಸರ್ಕಾರಿ ಜಾಗಗಳ ಒತ್ತುವರಿಯನ್ನು ತೆರವು ಮಾಡಲಾಗುವುದು. ಬಡವ ಮತ್ತು ಶ್ರೀಮತ ಎಂಬ ತಾರತಮ್ಯಕ್ಕೆ ಒಳಗಾಗದೆ ಯಾವುದೇ ಮುಲಜಿಲ್ಲದೆ ಒತ್ತುವರಿ ತೆರವು ಕಾರ್ಯ ನಡೆಯಲಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬಂದಾಗ ತೀವ್ರ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ನಿವಾರಣೆ ಮಾಡುವ ಸಲುವಾಗಿ ರಾಜ್ಯಾದ್ಯಂತ ಒತ್ತುವರಿ ತೆರವು ಮಾಡಲಾಗುವುದು. ಇದರಲ್ಲಿ ಬಡವ ಮತ್ತು ಶ್ರೀಮಂತ ಎಂಬ ಯಾವುದೇ ತಾರತಮ್ಯಕ್ಕೆ ಒಳಗಾಗುವುದಿಲ್ಲ ಎಂದು ಹೇಳಿದರು.

ಗುತ್ತಿಗೆ ಪೌರ ಕಾರ್ಮಿಕರ ಖಾಯಂ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ, ಈಗಾಗಲೇ 11 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರುನ್ನು ಖಾಯಂ ಗೊಳಿಸಲಾಗಿದೆ. ಹಂತ ಹಂತವಾಗಿ ಇನ್ನುಳಿದ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲಾಗುವುದು. ಪೌರ ಕಾರ್ಮಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು.

ಮೈಸೂರು ಜಿಲ್ಲೆಯಲ್ಲಿ ಪ್ರಮುಖ ನದಿಗಳು ಮತ್ತು ಜಲಾಶಯಗಳಿವೆ. ಆದರೂ ಕೆಲವು ಕಡೆ ನೀರಿನ ಸಮಸ್ಯೆಯಿದೆ. ಈ ಸಮಸ್ಯೆಯನ್ನು ಬಗೆಹರಿಸಲು ನಿರಂತರವಾಗಿ ಮೈಸೂರು ನಗರಕ್ಕೆ ನೀರು ಪೂರೈಕೆ ಮಾಡಲು ಸರ್ಕಾರ ಮುಂದಾಗಿದೆ. ಈಗಾಗಲೇ ಮೈಸೂರು ನಗರದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 15 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹೈಕೋರ್ಟ್ ಮೆಟ್ಟಿಲೇರಿದ್ದ ಮನೆ ಮಾಲೀಕರಿಗೆ ಬಿಬಿಎಂಪಿ ಶಾಕ್​​​: 29 ಕಟ್ಟಡಗಳ ವಿರುದ್ಧ ಕಾರ್ಯಾಚರಣೆಗೆ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.