ಮೈಸೂರು: ಮಧ್ಯಂತರ ಚುನಾವಣೆ ಇಲ್ಲ 3 ವರ್ಷಗಳ ಕಾಲ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿಯೇ ಇರುತ್ತಾರೆ ಎಂದು ಸಿಎಂ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳನ್ನು ಗೆಲ್ಲಲಿದ್ದು, ಮಧ್ಯಂತರ ಚುನಾವಣೆ ಸಾಧ್ಯವಿಲ್ಲ. ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನದಲ್ಲೇ ಕುಳಿತು ಕೊಳ್ಳಬೇಕು, ಇದನ್ನು ಪ್ರಚಾರಕ್ಕಾಗಿ ಹೇಳುತ್ತಿಲ್ಲ, ಅಳೆದು ತೂಗಿ ಈ ಮಾತನ್ನು ಹೇಳುತ್ತಿದ್ದೇನೆ ಎಂದರು.
ಅಲ್ಲದೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ ಆಗುತ್ತಾರೆ. ಅವರಿಗೆ ಅನುಭವವಿದೆ ಬೈ ಎಲೆಕ್ಷನ್ ನಂತರ ಹಲವು ಜೆಡಿಎಸ್ ನಾಯಕರು ಬಿಜೆಪಿಗೆ ಬರಲಿದ್ದಾರೆ ಎಂದರು. ಇದೆ ಸಂದರ್ಭದಲ್ಲಿ ಮಂಡ್ಯದ ಸಂಸದೆ ಸುಮಾಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಅವರು ಸಿಎಂ ಭೇಟಿಯಾಗಿದ್ದು ವಿಶೇಷವಾಗಿತ್ತು.
ಹುಳಿಮಾವು ಸಂತ್ರಸ್ತರ ಭೇಟಿ
ಇದೆ ಸಂದರ್ಭದಲ್ಲಿ ಬೆಂಗಳೂರು ಹುಳಿ ಮಾವು ಕೆರೆ ಸಂತ್ರಸ್ತರನ್ನು ಭೇಟಿ ಮಾಡಿ ಸ್ವಾಂತನ ತಿಳಿಸಲಿದ್ದೇನೆ. ಅಲ್ಲದೆ ಘಟನೆ ಕಾರಣದ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.