ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸುತ್ತೂರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಬಿಎಸ್ವೈ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಬಜೆಟ್ ಸಿದ್ಧತೆ ಹಾಗೂ ನಾಯಕತ್ವ ಬದಲಾವಣೆಯ ಗೊಂದಲದಲ್ಲಿರುವ ಮುಖ್ಯಮಂತ್ರಿಗಳು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ದಾರೆ.
ಓದಿ...ಜ.13 ಅಥವಾ 14 ರಂದು ಸಂಪುಟ ವಿಸ್ತರಣೆ: ಸಿಎಂ ಬಿಎಸ್ವೈ
ಚಾಮುಂಡಿ ಬೆಟ್ಟದಲ್ಲಿ ಸಿಎಂಗೆ ಪೂರ್ಣಕುಂಭ ಸ್ವಾಗತ ನೀಡಲಾಗಿದೆ. ಇದೇ ವೇಳೆ ಬಿಎಸ್ವೈಗೆ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದಾರೆ.