ETV Bharat / state

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರನ್ನು ಮನೆಗೆ ಕಳಿಸುತ್ತೇವೆ: ಸಿಎಂ ಬೊಮ್ಮಾಯಿ

ಗುಜರಾತ್​ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರಲ್ಲ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

author img

By

Published : Dec 10, 2022, 3:40 PM IST

Updated : Dec 10, 2022, 3:49 PM IST

bommai react on siddaramaiahs statement
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಮೈಸೂರು: ನಾವು ಮನೆಯಲ್ಲಿ ಕೂತರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಜರಾತ್​ನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ, ನಾವು ಮನೆಯಲ್ಲೇ ಕೂತರು ಗೆಲ್ಲುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಮುಂದಿನ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರನ್ನು ಮನೆಗೆ ಕಳುಹಿಸುತ್ತೇವೆ. ಆ ಚುನಾವಣೆಯಲ್ಲಿ ಸಿದ್ದರಾಮಯ್ಯ ಮನೆಗೆ ಹೋಗುವ ಕಾರ್ಯಕ್ರಮ ಇದೆ. ಆ ಕಾರಣದಿಂದ ಅವರು ಮನೆಯಲ್ಲೇ ಕೂತಿರುತ್ತಾರೆ ಎಂದು ವ್ಯಂಗ್ಯವಾಡಿದರು.

ಇನ್ನು, ಗುಜರಾತ್ ಚುನಾವಣೆ ನಂತರ ಕರ್ನಾಟಕದ ಚುನಾವಣೆ ಇದೆ. ಇಲ್ಲಿ ಬಿಜೆಪಿ ನಿರಂತರ ಜನರ ಸಂಪರ್ಕದಲ್ಲಿದೆ. ಪಕ್ಷ ಸಂಘಟನೆಯ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿದೆ. ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಹಾಗೂ ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷರಿಗೆ ತವರಿನಲ್ಲಿ ಭವ್ಯ ಸ್ವಾಗತ ಕೋರಿದ ಕೈ ನಾಯಕರು

Last Updated : Dec 10, 2022, 3:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.