ETV Bharat / state

ಸಿಎಂ ಬೊಮ್ಮಾಯಿ ಎರಡು ದಿನ ಮೈಸೂರು ಜಿಲ್ಲಾ ಪ್ರವಾಸ - ಎರಡು ದಿನ ಮೈಸೂರು ಜಿಲ್ಲಾ ಪ್ರವಾಸ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಅಕ್ಟೋಬರ್​ 4 ಮತ್ತು 5 ರಂದು ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

cm-bommai-two-days-mysore-tour
ಸಿಎಂ ಬೊಮ್ಮಾಯಿ ಎರಡು ದಿನ ಮೈಸೂರು ಜಿಲ್ಲಾ ಪ್ರವಾಸ
author img

By

Published : Oct 2, 2022, 10:21 PM IST

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅ.4ರಂದು ಮಂಗಳವಾರ ಸಂಜೆ 5.35ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅ.5ರಂದು ಬೆಳಿಗ್ಗೆ 9ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೆಳಗ್ಗೆ 10.30ಕ್ಕೆ ರಾಮಕೃಷ್ಣನಗರದ ಐ ಬ್ಲಾಕ್‌ನಲ್ಲಿರುವ ಪ್ರಾದೇಶಿಕ ಪತ್ರಿಕೆಯ ನೂತನ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 2.36ರಿಂದ 2.50 ಕ್ಕೆ ಅರಮನೆಯ ಬಲದ್ವಾರದಲ್ಲಿರುವ ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.07ರಿಂದ 5.18ರವರೆಗೆ ಅರಮನೆ ಒಳಾಂಗಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ.

ರಾತ್ರಿ 7.30 ರಿಂದ 9.30ವರೆಗೆ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತ್ ಟಾರ್ಚ್ ಲೈಟ್ ಪೆರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಬಿಜೆಪಿಯವರು ಅನಗತ್ಯವಾಗಿ ಜಗಳಕ್ಕೆ ಬರ್ತಿದ್ದಾರೆ: ಸಿಎಂ ಇಬ್ರಾಹಿಂ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.