ಮೈಸೂರು: ಕೊರೊನಾ, ಜಲಪ್ರಳಯ ನಿಲ್ಲಲಿ ಎಂದು ನಾಡ ದೇವಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಡರಾತ್ರಿ ಪ್ರಧಾನಿ ಮೋದಿ ದೂರವಾಣಿ ಮೂಲಕ ಮಾತನಾಡಿ ಜಲಪ್ರಳಯದ ಬಗ್ಗೆ ಮಾಹಿತಿ ಪಡೆದರು. ಅಗತ್ಯ ಪರಿಹಾರ ಕೊಡುತ್ತೇವೆ. ಜನರನ್ನ ರಕ್ಷಿಸಿ ಎಂದು ಹೇಳಿರೋದು ಸಮಾಧಾನ ತಂದಿದೆ. ಉತ್ತರ ಕರ್ನಾಟಕದ ಜನರ ಜೊತೆ ಸರ್ಕಾರ ಇದೆ. ಕೇಂದ್ರದಿಂದ ನೆರವು ಕೊಡುವ ಭರವಸೆ ನೀಡಿದ್ದಾರೆ ಎಂದರು.
ಕಂದಾಯ ಸಚಿವ ಆರ್.ಅಶೋಕ್ ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳ ಪ್ರವಾಸ ಮಾಡುತ್ತಿದ್ದಾರೆ. ಎಲ್ಲಾ ಡಿಸಿಗಳ ಖಾತೆಯಲ್ಲಿ ಹಣ ಇದೆ. ತುರ್ತು ಪರಿಹಾರಕ್ಕೆ ಸೂಚನೆ ನೀಡಲಾಗಿದೆ. ಕೆಲ ಗ್ರಾಮಗಳನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅಭಿವೃದ್ಧಿಗೆ ಹಣದ ಕೊರತೆ ಇಲ್ಲ. ಎಲ್ಲರೂ ಸೇರಿ ರಾಜ್ಯವನ್ನು ಅಭಿವೃದ್ಧಯತ್ತ ಮುನ್ನಡೆಸೋಣ. ಕರ್ನಾಟಕ ಆರ್ಥಿಕವಾಗಿ ಸದೃಢವಾಗಲು ನಾನು ಶ್ರಮಿಸುತ್ತಿದ್ದೇನೆ ಎಂದರು.