ಮೈಸೂರು: 12ನೇ ಶತಮಾನದಲ್ಲಿ ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದವರು ಬಸವಣ್ಣ. ಆಚಾರವೇ ಸ್ವರ್ಗ, ಅನಾಚಾರವೇ ನರಕ ಎಂದು ಹೇಳಿ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸಿದವರು ಬಸವಣ್ಣ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬಸವ ಭವನ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ದೇಶದ ಗಮನ ಸೆಳೆಯುವ ರೀತಿಯಲ್ಲಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ದಿ ಇನ್ನೆರಡು ವರ್ಷದಲ್ಲಿ ಪೂರ್ಣವಾಗುತ್ತದೆ. ಕರ್ನಾಟಕ ಅನೇಕ ಶರಣ, ಶರಣೆಯರಿಗೆ ಜನ್ಮಕೊಟ್ಟ ಕರ್ಮಭೂಮಿ. ಅಲ್ಲಮಪ್ರಭು, ಅಕ್ಕಮಹಾದೇವಿ, ಬಸವಣ್ಣ ಶರಣರ ಭೂಮಿ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಓದಿ: ಅಕ್ಕಮಹಾದೇವಿ ಮಹಿಳಾ ಸಮಾನತೆಯ ಪ್ರತೀಕ: ಸಿಎಂ ಯಡಿಯೂರಪ್ಪ
ಸರ್ಕಾರ ಈಗಾಗಲೇ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚಿಸಿ 500 ಕೋಟಿ ಮೀಸಲಿಟ್ಟಿದೆ. ಸಮಾಜದ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಬಿಎಸ್ವೈ ಹೇಳಿದರು.