ಮೈಸೂರು: ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನಿಂದ ಸ್ಥಾಪಿತವಾಗಿರುವ ಕೋವಿಡ್-19ಪರೀಕ್ಷಾ ಕೇಂದ್ರವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಆನ್ ಲೈನ್ ಮೂಲಕ ಉದ್ಘಾಟಿಸಿದರು.
ನಗರದ ಜೆ.ಎಸ್.ಎಸ್. ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಿಂದ ನೂತನವಾಗಿ ನಿರ್ಮಾಣವಾಗಿರುವ ಕೋವಿಡ್-19 ಪರೀಕ್ಷಾ ಕೇಂದ್ರಕ್ಕೆ ಬೆಂಗಳೂರಿನಿಂದ ಆನ್ ಲೈನ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ನವರು ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ವಹಿಸಿದ್ದರು. ನಂತರ ಮಾತನಾಡಿದ ಶ್ರೀಗಳು ಖಾಸಗಿ ಆಸ್ಪತ್ರೆಯಲ್ಲಿ ಸ್ಥಾಪನೆಯಾದ ಮೊದಲ ಕೋವಿಡ್ ಪರೀಕ್ಷಾ ಕೇಂದ್ರ ಇದಾಗಿದ್ದು , ಕೋವಿಡ್ ಲಕ್ಷಣ ಇರುವವರು ಇಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬಹುದಾಗಿದೆ. ಅಲ್ಲದೇ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೋವಿಡ್ ಸೋಂಕನ್ನು ಪತ್ತೆ ಹಚ್ಚಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.