ETV Bharat / state

ಪತ್ರಿಕಾ ರಂಗ ತನ್ನ ಜವಾಬ್ದಾರಿ ಮರೆತಿದೆ: ಸಿಎಂ ಸಿದ್ದರಾಮಯ್ಯ

ನಾನು ವಾಕ್​ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬದ್ಧವಾಗಿದ್ದೇನೆ. ನನ್ನ ವಿರುದ್ಧ ಯಾರೇ ಸುದ್ದಿ ಬರೆದರೂ, ಯಾಕೆ ಈ ರೀತಿ ಬರೆದಿದ್ದೀರಿ ಎಂದು ಕೇಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

cm-siddaramaiah-reaction-on-journalism
ಪತ್ರಿಕಾ ರಂಗ ತನ್ನ ಜವಾಬ್ದಾರಿಯನ್ನು ಮರೆತಿದೆ: ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Dec 22, 2023, 4:47 PM IST

ಸಿಎಂ ಸಿದ್ದರಾಮಯ್ಯ ಭಾಷಣ

ಮೈಸೂರು: "ಊಹಾಪೋಹದ ಸುದ್ದಿ ಮಾಡುವುದೇ ವೃತ್ತಿಪರತೆಯೇ?. ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ. ಪ್ರಸ್ತುತ ಪ್ರತಿಕಾ ರಂಗ ತನ್ನ ಜವಾಬ್ದಾರಿಯನ್ನು ಮರೆತಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಇಂದು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, "ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೆ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗುತ್ತಾ?. ವಸ್ತುನಿಷ್ಠ ಸುದ್ದಿ, ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ"ಎಂದು ಹೇಳಿದರು.

"ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು. ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು. ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ" ಎಂದು ಪ್ರಶ್ನಿಸಿದರು.

"ಗಂಡ-ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ?. ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ?. ನಾನು ವಾಕ್​ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬದ್ಧವಾಗಿದ್ದೇನೆ. ನನ್ನ ವಿರುದ್ಧ ಯಾರೇ ಸುದ್ದಿ ಬರೆದರೂ ಯಾಕೆ ಈ ರೀತಿ ಬರೆದಿದ್ದೀರಾ ಎಂದು ಕೇಳುವುದಿಲ್ಲ. ನಾನು ಯಾವುದೇ ಟಿವಿ ಚಾನೆಲ್​ ಮತ್ತು ಪತ್ರಿಕೆಗಳಿಗೆ ಫೋನ್​ ಮಾಡಿದ ನಿದರ್ಶನ ಇಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ವಾಕ್​ ಮತ್ತು ಅಭಿವ್ಯಕ್ತಿ ಇರಬೇಕು. ಆದ್ದರಿಂದ ಇದನ್ನು ಬಂದ್​ ಮಾಡುವಂಥದ್ದಲ್ಲ" ಎಂದು ಹೇಳಿದರು.

  • ಮುಖ್ಯಮಂತ್ರಿ @siddaramaiah ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು.

    ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ… pic.twitter.com/TxEaoGPuow

    — CM of Karnataka (@CMofKarnataka) December 22, 2023 " class="align-text-top noRightClick twitterSection" data=" ">

"ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರವನ್ನು ನಾನೇ ಉದ್ಘಾಟಿಸುತ್ತೇನೆ" ಎಂದ ಅವರು, ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.

ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ದೇಶದಲ್ಲಿ ಯಾವುದೇ ಪರಿಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂಥದ್ದು?: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.