ETV Bharat / state

ಮೈಸೂರಿನ ಮಹಾರಾಣಿ ಕಾಲೇಜು ಕಟ್ಟಡ, ವಸತಿ ನಿಲಯ ನಿರ್ಮಾಣಕ್ಕೆ ₹150 ಕೋಟಿ: ಸಿಎಂ ಸಿದ್ದರಾಮಯ್ಯ - etv bharat karnataka

ಸಿಎಂ ಸಿದ್ದರಾಮಯ್ಯ ಅವರು ಇಂದು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Etv Bharat
Etv Bharat
author img

By ETV Bharat Karnataka Team

Published : Oct 23, 2023, 5:53 PM IST

ಮೈಸೂರು: ಇಲ್ಲಿನ ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಲೇಜು ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು.

CM siddaramaiah
ಕಾಮಗಾರಿಯ ನೀಲನಕ್ಷೆ ವೀಕ್ಷಿಸಿದ ಸಿಎಂ

2,000 ವಿದ್ಯಾರ್ಥಿಗಳ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯ ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೆಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು.

51 ಕೋಟಿ ರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂ. ವೆಚ್ಚದಲ್ಲಿ ಆಟ್ಸ್​ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ.

CM siddaramaiah
ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಸಿಎಂ ಭೇಟಿ

ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದು ಟೀಕಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕಾರ್ಯಕ್ರಮಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ: ಅರಮನೆಯ ಕಲ್ಯಾಣ ಮಂಟಪದಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಖಾಸಗಿ ಆಯುಧಗಳಿಗೆ ಇಂದು ಆಯುಧ ಪೂಜೆ ನೆರವೇರಿಸಿದರು. ಇದಕ್ಕೂ ಮುನ್ನ ಬೆಳಿಗ್ಗೆ ಆಯುಧಗಳನ್ನು ಶ್ರೀ ಕೋಡಿ ಸೋಮೇಶ್ವರ ದೇವಾಲಯದ ಸಮೀಪ ತೆಗೆದುಕೊಂಡು ಹೋಗಿ ಸ್ವಚ್ಛಗೊಳಿಸಲಾಗಿತ್ತು. ನಂತರ ಅವುಗಳನ್ನು ಕಲ್ಯಾಣ ಮಂಟಪಕ್ಕೆ ತಂದಿಟ್ಟು ಸಾಂಪ್ರದಾಯಿಕ ಪೂಜಾವಿಧಿಯನ್ನು ಮಧ್ಯಾಹ್ನ 12.20 ರಿಂದ 12.45 ರ ಶುಭ ಲಗ್ನದಲ್ಲಿ ಯದುವೀರ್ ನೇರವೇರಿಸಿದರು. ಕನ್ನಡಿ ತೊಟ್ಟಿಯಲ್ಲಿ ಪಟ್ಟದ ಹಸು, ಪಟ್ಟದ ಕುದುರೆ, ಪಟ್ಟ ಆನೆ ಹಾಗೂ ಅರಮನೆಯ ಹೆಣ್ಣಾನೆಗಳು ಮತ್ತು ತಾವು ಬಳಸುವ ಖಾಸಗಿ ದುಬಾರಿ ಬೆಳೆಯ ಕಾರುಗಳಿ ಅವರುಗೂ ಪೂಜೆ ಸಲ್ಲಿಸಿದರು. ಇದಾದ ನಂತರ ಕನ್ನಡಿ ತೊಟ್ಟಿಯ ಆಯುಧ ಪೂಜೆ ಮುಕ್ತಾಯವಾಯಿತು. ಸಂಜೆ ಖಾಸಗಿ ದರ್ಬಾರ್ ನಂತರ ವಾಣಿವಿಲಾಸ ದೇವರ ಮನೆಗೆ ತೆರಳಿ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್​​ನಲ್ಲಿ ಏತಕ್ಕಾಗಿ ಇದ್ದರು : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.