ETV Bharat / state

ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಬಾರಿ ಬಸ್​ನ ಮೇಲ್ಭಾಗದಲ್ಲಿ ಕುಳಿತು ಮೈಸೂರು ದಸರಾ ದೀಪಾಲಂಕಾರ ಕಣ್ತುಂಬಿಕೊಂಡರು.

author img

By ETV Bharat Karnataka Team

Published : Oct 24, 2023, 8:28 AM IST

Updated : Oct 24, 2023, 10:10 AM IST

CM Siddaramaiah watched the Mysuru Dasara lightings in ambari
ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ
ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು 3 ದಿನಗಳ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಏರ್ ಶೋ ವೀಕ್ಷಣೆ ಮಾಡಿದ ಬಳಿಕ, ಅಂಬಾರಿ ಬಸ್​ನಲ್ಲಿ ಜನರಿಗೆ ಕೈ ಬೀಸುತ್ತಾ ದಸರಾ ದೀಪಾಲಂಕಾರ ವೀಕ್ಷಿಸಿದರು.

ಸೋಮವಾರ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ದಸರಾ ಏರ್​ ಶೋ ವೀಕ್ಷಣೆ ಮಾಡಿದ ಬಳಿಕ ಸಂಜೆ ಅರಮನೆಯ ಮುಂಭಾಗದ ಬಸವೇಶ್ವರ ವೃತ್ತದಿಂದ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಅಂಬಾರಿ ಬಸ್​ನ ಮೇಲ್ಭಾಗದಲ್ಲಿ ಕುಳಿತು ದಸರಾ ದೀಪಾಲಂಕಾರವನ್ನು ಕಣ್ತುಂಬಿಕೊಂಡರು. ಈ ವೇಳೆ ದೀಪಾಲಂಕಾರ ನೋಡಲು ಬಂದಿದ್ದ ಜನರಿಗೆ ಕೈ ಬೀಸುತ್ತಾ ಸಾಗಿದರು. ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಸಾಥ್ ನೀಡಿದರು.

ಇದನ್ನೂ ಓದಿ: ಆಕರ್ಷಕ ದೀಪಾಲಂಕಾರಗಳಿಂದ ಜಗಮಗಿಸುತ್ತಿದೆ ಸಾಂಸ್ಕೃತಿಕ ನಗರಿ ಮೈಸೂರು: ಚಿತ್ರಗಳಲ್ಲಿ ನೋಡಿ

ಇಂದು ದಸರಾ ಜಂಬೂ ಸವಾರಿ: ಇಂದು ನಡೆಯಲಿರುವ ವಿಶ್ವವಿಖ್ಯಾತ ಸಾಂಪ್ರದಾಯಿಕ ಮೈಸೂರು ದಸರಾ ಜಂಬೂ ಸವಾರಿಗೆ (ವಿಜಯದಶಮಿ ಮೆರವಣಿಗೆ) ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಚಿನ್ನದ ಅಂಬಾರಿಯಲ್ಲಿ ಆಸೀನಳಾಗುವ ನಾಡದೇವತೆ ಶ್ರೀ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ವೈಭವದ ಜಂಬೂ ಸವಾರಿ ಮೆರವಣಿಗೆಗೆ ವಿಧ್ಯುಕ್ತ ಚಾಲನೆ ಸಿಗಲಿದೆ.

ದಸರಾ ದೀಪಾಲಂಕಾರ ವೀಕ್ಷಿಸಲು ನೆರೆದಿದ್ದ ಜನರು

ಜಂಬೂಸವಾರಿ ಮೆರವಣಿಗೆಗೆ 47 ಸ್ತಬ್ಧಚಿತ್ರಗಳು ಹಾಗೂ ಕಲಾತಂಡಗಳು ಸಿದ್ಧವಾಗಿವೆ. ಮಧ್ಯಾಹ್ನ 1.46 ರಿಂದ 2.08 ರ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವರು. ಈ ಮೂಲಕ ಮೆರವಣಿಗೆಗೆ ಚಾಲನೆ ಸಿಗಲಿದೆ. ಆ ನಂತರ ಸ್ತಬ್ಧಚಿತ್ರಗಳು, ಕಲಾತಂಡಗಳು ನಿಶಾನೆ ಆನೆಗಳು ಮೆರವಣಿಗೆ ಹೊರಡಲಿವೆ.

ಸಂಜೆ 4.40 ರಿಂದ 5 ವರೆಗೆ ಸಲ್ಲುವ ಶುಭ ಮೀನ ಮುಹೂರ್ತದಲ್ಲಿ ಅಭಿಮನ್ಯು ಆನೆ ಹೊತ್ತ ಶ್ರೀ ಚಾಮುಂಡೇಶ್ವರಿ ದೇವಿಗೆ ಗಣ್ಯರು ಪುಷ್ಪಾರ್ಚನೆ ಮಾಡುವರು. ಈ ಮೂಲಕ ಮೆರವಣಿಗೆ ಪ್ರಾರಂಭವಾಗಲಿದ್ದು, ಸುಮಾರು 5 ಕಿ.ಮೀ ದೂರ ರಾಜಪಥದಲ್ಲಿ ಸಾಗಲಿದೆ. ನಂತರ ಈ ಮೆರವಣಿಗೆ ಬನ್ನಿಮಂಟಪದಲ್ಲಿ ಕೊನೆಗೊಳ್ಳಲಿದೆ. ಮೆರವಣಿಗೆಯಲ್ಲಿ ನಾಡಿನ ಕಲೆ, ಸಂಸ್ಕೃತಿ, ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಇರಲಿವೆ.

ಅಂಬಾರಿ ಸುತ್ತ ಭದ್ರತೆ: ಅಂಬಾರಿ ಹೊರಡುವ ಮಾರ್ಗದಲ್ಲಿ ಭಾರಿ ಭದ್ರತೆಯ ಜತೆಗೆ ಅಂಬಾರಿ ಆನೆಯ ಸುತ್ತಲೂ ಭದ್ರತೆ ಹಾಕಲಾಗಿದೆ. ವಿಶೇಷ ಪೊಲೀಸ್ ಘಟಕ ನಿಯೋಜನೆ ಮಾಡಲಾಗಿದೆ. ಬಾಂಬ್ ಪತ್ತೆ ಹಾಗೂ ನಿಗ್ರಹದಳ, ಶ್ವಾನದಳ ಸೇರಿದಂತೆ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸಿವಿಲ್ ಪೊಲೀಸ್, ಕೆಎಸ್ಆರ್‌ಪಿ, ಸಿಎಆರ್, ಡಿಎಆರ್ ಇರಲಿದೆ ಎಂದು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಈಟಿವಿ ಭಾರತ್‌ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನಾಳೆ ಶಿವಮೊಗ್ಗದಲ್ಲಿ ವಿಜಯದಶಮಿ ಮೆರವಣಿಗೆ: ಅಂಬಾರಿ ಹೊರುವ ಸಾಗರ ಆನೆಗೆ ಅಂತಿಮ ಹಂತದ ತಾಲೀಮು

Last Updated : Oct 24, 2023, 10:10 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.