ETV Bharat / state

ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ - etv bharat kannada

ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ತವರು ಜಿಲ್ಲೆ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

cm-siddaramaiah-will-visit-mysore-for-three-days-from-tomorrow
ನಾಳೆಯಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ
author img

By ETV Bharat Karnataka Team

Published : Aug 26, 2023, 8:29 PM IST

Updated : Aug 26, 2023, 9:28 PM IST

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 27ರ ಬೆಳಗ್ಗೆ 8 ಗಂಟೆಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 28ರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ರಾತ್ರಿ 7 ಗಂಟೆಗೆ ಹೋಟೆಲ್ ಜೆಪಿ ಪ್ಯಾಲೇಸ್​ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಆಗಸ್ಟ್ 29 ರಂದು ಬೆಳಗ್ಗೆ 10:30ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ, ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಧ್ಯಾಹ್ನ 1:45ಕ್ಕೆ ಕೆಆರ್​ ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ, ಸಂಜೆ 6 ಗಂಟೆಗೆ ವಕೀಲರ ಸಂಘದ ಕಚೇರಿಗೆ ಭೇಟಿ ನೀಡಲಿದ್ದಾರೆ.

ಆಗಸ್ಟ್ 30 ಬುಧವಾರ ಬೆಳಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ಕಾರ್ಯಕ್ರಮದಲ್ಲಿ ಹಾಗೂ ಮಧ್ಯಾಹ್ನ 3:50 ಕ್ಕೆ ಸಿದ್ದಲಿಂಗಪುರದ ಕನಕ ಭವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಸಿ.ಜೆ. ಬೆಟಸೂರ ಮಠ

ಆ.29ರಂದು ಡಾ. ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108ನೇ ಜಯಂತಿ: ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ 23ನೇ ಪೀಠಾಧಿಪತಿ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 108ನೇ ಜಯಂತಿಯನ್ನು ಆ.29ರಂದು ಆಯೋಜಿಸಲಾಗಿದೆ ಎಂದು ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಸಿ.ಜೆ. ಬೆಟಸೂರ ಮಠ ತಿಳಿಸಿದರು. ರಾಜೇಂದ್ರ ಸಭಾಂಗಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದಲ್ಲಿ ಬೆಳಗ್ಗೆ 10:30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸಾನಿಧ್ಯ ಕಾರ್ಯಕ್ರಮದ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಪ್ರತಾಪಸಿಂಹ ರಾಜಗುರು ತಿಲಕ ಕೃತಿ ಬಿಡುಗಡೆ ಮಾಡಲಿದ್ದಾರೆ. ಶಾಸಕ ಜಿ ಟಿ ದೇವೇಗೌಡ ಪ್ರಸಾದ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದು, ಶಾಸಕರಾದ ತನ್ವೀರ್ ಸೇಠ್, ಟಿ ಎಸ್ ಶ್ರೀವತ್ಸ, ಕೆ ಹರೀಶ್ ಗೌಡ, ಮೇಯರ್ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಈ ವೇಳೆ ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಶಿವಕುಮಾರಸ್ವಾಮಿ, ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ನಿರಂಜನಮೂರ್ತಿ ಇದ್ದರು.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಕಾಂಗ್ರೆಸ್​ನ ಶಕ್ತಿ ಪ್ರದರ್ಶನ ಅಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Last Updated : Aug 26, 2023, 9:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.