ಮೈಸೂರು : ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಮೈಸೂರಿನ ಮದುವೆ ಮಂಟಪವೊಂದರಲ್ಲಿ ವಿಶೇಷವಾಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಿದ್ದಾರ್ಥ ನಗರದಲ್ಲಿರುವ ಕನಕ ಭವನದಲ್ಲಿ ನಡೆದ ಮನು ಕಿರಣ್ ಮತ್ತು ಲಾವಣ್ಯ ಎಂಬುವರ ಮದುವೆ ಸಮಾರಂಭದಲ್ಲಿ ಮದು ಮಕ್ಕಳು ಹಾಗೂ ಮದುವೆಗೆ ಬಂದ ಅತಿಥಿಗಳಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಪುನೀತ್ ರಾಜ್ಕುಮಾರ್ ಅಭಿಮಾನಿಯಾಗಿರುವ ಮಧು ಮಗ ಮನುಕಿರಣ್, ಮೆಚ್ಚಿನ ನಟನ ಅಗಲಿಕೆಗೆ ತಮ್ಮ ವಿವಾಹ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸ್ನೇಹಿತರು ಹಾಗೂ ಮದುವೆಗೆ ಆಗಮಿಸಿದ್ದ ಸಂಬಂಧಿಗಳು, ಮೇಣದ ಬತ್ತಿ ಹಿಡಿದು ಶನಿವಾರ ರಾತ್ರಿ ಶ್ರದ್ಧಾಂಜಲಿ ಸಲ್ಲಿಸಿದರು.