ETV Bharat / state

ರಾಜ್ಯದಲ್ಲಿರೋದು ಕಾಂಗ್ರೆಸ್-ಬಿಜೆಪಿ ಮೈತ್ರಿ ಸರ್ಕಾರ: ಡಿಕೆಶಿ ವ್ಯಂಗ್ಯ - ಮೈಸೂರು

ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದ್ದಾರೆ. ಆದರಿಂದ ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೆಸ್- ಬಿಜೆಪಿ ಮೈತ್ರಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

D.K. Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
author img

By

Published : Jan 25, 2021, 4:45 PM IST

Updated : Jan 25, 2021, 4:55 PM IST

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್- ಬಿಜೆಪಿ ಮೈತ್ರಿ ಸರ್ಕಾರ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಇಂದು ಸುತ್ತೂರು ಮಠಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೈತ ಹೋರಾಟವನ್ನು ಹತ್ತಿಕ್ಕಲು ಹಾಗೂ ರೈತರ ಬಾಯಿ ಮುಚ್ಚಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಕೇವಲ ಟ್ರಾಫಿಕ್ ಜಾಮ್ ಆಗುತ್ತದೆ ಎಂದು ರೈತರ ಱಲಿಗೆ ಅನುಮತಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾಳೆ ರಜಾ ದಿನ, ಹಾಗಾಗಿ ಯಾವುದೇ ಟ್ರಾಫಿಕ್ ಜಾಮ್ ಇರುವುದಿಲ್ಲ. ಸರ್ಕಾರ ಅನ್ನದಾತನ ಕೂಗಿಗೆ ಧ್ವನಿಯಾಗಬೇಕು ಅದನ್ನ ಬಿಟ್ಟು ಅನ್ನದಾತನ ಹೋರಾಟವನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ ಡಿಕೆಶಿ, ಕಾಂಗ್ರೆಸ್ ಪಕ್ಷ ರೈತ ಹೋರಾಟಕ್ಕೆ ಬೆಂಬಲ ಕೊಡುತ್ತದೆ. ಅವರ ಪರವಾಗಿ ನಿಲ್ಲುತ್ತೇವೆ ಎಂದರು.

ಓದಿ: ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಡಿಕೆಶಿ

ಕಾಂಗ್ರೆಸ್ ಪಕ್ಷದ ಸದಸ್ಯರನ್ನು ಕರೆದುಕೊಂಡು ಹೋಗಿ ಬಿಜೆಪಿಯವರು ಸರ್ಕಾರ ರಚಿಸಿದ್ದಾರೆ. ಆದರಿಂದ ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೆಸ್-ಬಿಜೆಪಿ ಮೈತ್ರಿ ಸರ್ಕಾರ ಎಂದು ಅವರು ವ್ಯಂಗ್ಯವಾಡಿದರು. ರಾಜ್ಯದಲ್ಲಿ ಸುಭದ್ರ ಸರ್ಕಾರ ಇದೆ. ಎಲ್ಲರೂ ಒಗ್ಗಟ್ಟಿನಿಂದ ಸಹಕಾರ ನಿಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಸರ್ಕಾರದ ಉನ್ನತ ಅಧಿಕಾರಿಗಳನ್ನ ಕೇಳಿ ಗೊತ್ತಾಗುತ್ತದೆ ಎಂದು ಡಿಕೆಶಿ ಮಾರ್ಮಿಕವಾಗಿ ನುಡಿದರು.

Last Updated : Jan 25, 2021, 4:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.